ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ನಡೆಯುತ್ತಿರುವ ೪೮ ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾದ ಅಂಗವಾಗಿ ಜಾನಪದ ಸಾಂಸ್ಕೃತಿಕ ವೈಭವ ನಡೆಯಿತು. ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶಾರದಾಂಬಾ ವೇದಿಕೆಯಲ್ಲಿ ಮಂಜು ಸುಳ್ಯ ನೇತೃತ್ವದ ಸುಗಿಪು ಜನಪದ ಕಲಾ ತಂಡದ ಜನಪದ ನೃತ್ಯ ರೂಪಕ ಮತ್ತು ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಾರ್ವಜನಿಕ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಚಾಲನೆ ನೀಡಿದರು.ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್ ಅಧ್ಯಕ್ಷತೆ ವಹಿಸಿದ್ದರು .
ಅತಿಥಿಗಳಾಗಿ ಸ್ಥಬ್ಧ ಚಿತ್ರಗಳ ರೂವಾರಿ ಕೇಶವ ಸುವರ್ಣ, ಎಸ್. ಸಿಕ್ಸ್ ನ ಉಪಾಧ್ಯಕ್ಷ ಚಿದಾನಂದ ವಿದ್ಯಾನಗರ, ವಕೀಲ ದಿನೇಶ್ ಅಂಬೆಕಲ್ಲು, ಸುಗಿಪು ಕಲಾ ತಂಡದ ನಿರ್ದೇಶಕ ಮಂಜು ಸುಳ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಿದಾನಂದ ವಿದ್ಯಾನಗರ ಸ್ವಾಗತಿಸಿದರು. ನಾರಾಯಣ ಕೇಕಡ್ಕ ವಂದಿಸಿದರು. ದಸರಾ ಸೇವಾ ಟ್ರಸ್ಟ್ ನ ಉಪಾಧ್ಯಕ್ಷ ಬೂಡು ರಾಧಾಕೃಷ್ಣ ರೈ ಕಾರ್ಯಕ್ರಮ ನಿರೂಪಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.