ಸಂಗ್ರಹ ಚಿತ್ರ
ಮುಂಬೈ: ಚೀನಾ ಸೇರಿದಂತೆ ವಿಶ್ವದ ನಾನಾ ದೇಶಗಳಲ್ಲಿ ಮರಣ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್ ಎಫೆಕ್ಟ್ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದ್ದು, ಕೇವಲ 5 ನಿಮಿಷಗಳ ಅಂತರದಲ್ಲಿ ಹೂಡಿಕೆದಾರರು 5 ಲಕ್ಷ ಕೋಟಿ ರೂ ನಷ್ಟ ಅನುಭವಿಸಿದ್ದಾರೆ.
ಕೊರೋನಾ ವೈರಸ್ ಭೀತಿ ಉತ್ಪಾದನಾ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇದರ ದುಷ್ಪರಿಣಾಮ ಇದೀಗ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದೆ. ಆರಂಭಿಕ ವಹಿವಾಟಿನಲ್ಲಿಯೇ ಸೆನ್ಸೆಕ್ಸ್ 1,155 ಅಂಕ ಕುಸಿತ ಕಂಡಿದ್ದು, ನಿಫ್ಟಿಯು ಕೂಡ 346 ಅಂಕ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಷೇರುಗಳ ಮೌಲ್ಯದಲ್ಲಿ ಭಾರೀ ಇಳಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ಈ ದಿಢೀರ್ ನಕಾರಾತ್ಮಕ ಬೆಳವಣಿಗೆಯಿಂದಾಗಿ ಹೂಡಿಕೆದಾರರು 5 ಲಕ್ಷ ಕೋಟಿ ರೂಗಳ ನಷ್ಟ ಅನುಭವಿಸುವಂತಾಗಿದೆ.
ಷೇರು ಕುಸಿತ ಬ್ಯಾಂಕಿಂಗ್, ಆಟೋಮೊಬೈಲ್, ಲೋಹ, ತೈಲ ಮತ್ತು ಅನಿಲ ಕಂಪನಿಗಳ ಮೇಲೆ ನಕರಾತ್ಮಕ ಪ್ರಭಾವ ಬೀರಿದ್ದು, ಕಂಪನಿಗಳ ಷೇರು ಮೌಲ್ಯದಲ್ಲಿ ಭಾರಿ ಕುಸಿತ ಕಂಡು ಬಂದಿದೆ. ಷೇರು ಹೂಡಿಕೆದಾರರು ಹಾಗೂ ಕಂಪನಿಗಳು ಭಾರಿ ಪ್ರಮಾಣದ ನಷ್ಟ ಅನುಭವಿಸಿವೆ.
ಷೇರು ಮಾರುಕಟ್ಟೆ ಕುಸಿತದಿಂದ ರೂಪಾಯಿ ಮೌಲ್ಯದಲ್ಲೂ ಕೂಡ ಇಳಿಕೆ ಕಂಡುಬಂದಿದೆ. 33 ಪೈಸೆ ಇಳಿಕೆ ಕಂಡಿರುವ ರೂಪಾಯಿ ಮೌಲ್ಯ ಸದ್ಯಕ್ಕೆ ಅಮೆರಿಕ ಡಾಲರ್ ಎದುರು 71.94 ರೂ. ಇದೆ.
ಇಂದಿನ ವಹಿವಾಟಿನಲ್ಲಿ ಟಾಟಾ ಸ್ಟೀಲ್, ಟೆಕ್ ಮಹೀಂದ್ರಾ, ಇನ್ಫೋಸಿಸ್, ಮಹೀಂದ್ರಾ ಮತ್ತು ಮಹೀಂದ್ರಾ, ಬಜಾಜ್ ಫೈನಾನ್ಸ್, ಎಚ್‌ಸಿಎಲ್ ಟೆಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಗಳು ಭಾರಿ ನಷ್ಟ ಅನುಭವಿಸಿದ್ದು, ಈ ಸಂಸ್ಥೆಗಳ ಷೇರುಮೌಲ್ಯದಲ್ಲಿ ಕುಸಿತ ಕಂಡುಬಂದಿದೆ.
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…
ಆನೆ ಸೆರೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು ಮತ್ತು ಯಶಸ್ವಿಯಾಗಿ ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ…