ಮಡಿಕೇರಿ : ನಿರಂತರ ಗೆಲುವಿನ ಅಹಂನಿಂದ ಮೈಮರೆಯದೆ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮತ್ತಷ್ಟು ಪ್ರಬಲವಾಗಿ ಸಂಘಟಿಸುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಬಿಜೆಪಿ ಮುಖಂಡರಿಗೆ ಕಿವಿಮಾತು ಹೇಳಿದ್ದಾರೆ.
ಭಾರತೀಯ ಜನತಾ ಪಾರ್ಟಿಯನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಜು.6ರಿಂದ ಆ.11ರವರೆಗೆ ದೇಶಾದ್ಯಂತ ‘ಸಾಥ್ ಆಯೇ-ದೇಶ್ ಬನಾಯೇ’ ಎಂಬ ಘೋಷ ವಾಕ್ಯದೊಂದಿಗೆ ‘ಸಂಘಟನ್ ಪರ್ವ’ ಸದಸ್ಯತ್ವ ಅಭಿಯಾನ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಇಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗಾಗಿ ಕಾರ್ಯಾಗಾರ ನಡೆಯಿತು.
ನಗರದ ಜಿಲ್ಲಾ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಸಿ.ಟಿ.ರವಿ, ಕೊಡಗಿನಲ್ಲಿ ಮುಂದಿನ ದಿನಗಳಲ್ಲಿ 25 ಸಾವಿರ ನೂತನ ಸದಸ್ಯರನ್ನು ಬಿಜೆಪಿಗೆ ಸೇರ್ಪಡೆಗೊಳಿಸಬೇಕು. ಕಳೆದ ಬಾರಿ ಜಿಲ್ಲೆಯಲ್ಲಿ 48 ಸಾವಿರ ನೂತನ ಸದಸ್ಯರನ್ನು ಸೇರ್ಪಡೆಗೊಳಿಸಿರುವುದು ಶ್ಲಾಘನೀಯ ಎಂದರು. ಯಾವ ವರ್ಗ ಜತೆಗಿಲ್ಲವೋ ಅಂಥವರ ವಿಶ್ವಾಸ ಪಡೆದು ಪಕ್ಷಕ್ಕೆ ಸೇರ್ಪಡೆಗೊಳಿಸಿ. ಕೇಂದ್ರ ಸರ್ಕಾರ ಈವರೆಗೂ ಯೋಜನೆಗಳನ್ನು ಜಾರಿಗೊಳಿಸುವಾಗ ಯಾವುದೇ ಜಾತಿ, ಧರ್ಮದ ತಾರತಮ್ಯ ಮಾಡಿಲ್ಲ ಎಂಬ ಅಂಶವನ್ನು ಇಂಥವರಿಗೆ ಮನವರಿಕೆ ಮಾಡಿ. ವ್ಯಕ್ತಿಗಾಗಿ ಅಲ್ಲದೆ ದೇಶಕ್ಕಾಗಿ ಕಾರ್ಯನಿರ್ವಹಿಸುವ ಬಿಜೆಪಿ ಮುಖಂಡರ ಕಾರ್ಯವೈಖರಿಯನ್ನು ಮನದಟ್ಟು ಮಾಡಿಕೊಡಿ ಎಂದು ಕರೆ ನೀಡಿದರು. ಸಮಾನ ನಾಗರಿಕ ಸಂಹಿತೆಯಂಥ ಕಾನೂನು ಜಾರಿಯಿಂದ ದೇಶದಲ್ಲಿ ಎಲ್ಲರಿಗೂ ಸಮಾನ ನ್ಯಾಯ ದೊರಕಿದಂತಾಗುತ್ತದೆಯೇ ಹೊರತು ಈ ಕಾನೂನು ಯಾರಿಗೂ ಅನ್ಯಾಯ ಮಾಡುವುದಿಲ್ಲವೆಂದು ಅಭಿಪ್ರಾಯಪಟ್ಟರು.
ಬಿಜೆಪಿ ಒಂದೇ ಒಂದು ಸ್ಥಾನ ಗಳಿಸದ ಕೇರಳ, ತಮಿಳುನಾಡು ಸೇರಿದಂತೆ 3 ರಾಜ್ಯಗಳಲ್ಲಿ ಮುಂದಿನ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಪಡೆಯುವಂತೆ ಮಾಡುವುದೇ ನಮ್ಮ ಗುರಿಯಾಗಿದೆ ಎಂದೂ ರವಿ ತಿಳಿಸಿದರು.
ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ಪ್ರಕೃತಿ ವಿಕೋಪ ಸಂದರ್ಭ 6 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಸಂತ್ರಸ್ತರಿಗೆ ನೀಡಲಾಗಿದೆ ಎಂದು ಸರ್ಕಾರ ವೆಚ್ಚ ತೋರಿಸಿದೆ. ಆದರೆ, ಬಹುತೇಕ ದಾನಿಗಳೇ ಎಲ್ಲಾ ವಸ್ತು, ಪರಿಕರಗಳನ್ನು ಸಂತ್ರಸ್ತರಿಗೆ ನೀಡಿರುವಾಗ ಇಷ್ಟೊಂದು ಕೋಟಿ ರೂ. ವೆಚ್ಚವಾಗಿರುವುದಾದರೂ ಹೇಗೆ ಎಂದು ಪ್ರಶ್ನಿಸಿದರು. ಈ ದುರುಪಯೋಗದ ಬಗ್ಗೆ ಸೂಕ್ತ ತನಿಖೆ ನಡೆಯಬೇಕೆಂದು ಒತ್ತಾಯಿಸಿದರು.
ವಿಧಾನಪರಿಷತ್ ಸದಸ್ಯ ಎಂ.ಪಿ.ಸುನೀಲ್ ಸುಬ್ರಹ್ಮಣಿ ಮಾತನಾಡಿ, ವಾರಣಾಸಿಯಲ್ಲಿ ಜಾರಿಗೊಳಿಸಿದಂತೆ ವೈನಾಡ್ ನಲ್ಲಿಯೂ ಸಾಕಷ್ಟು ಯೋಜನೆ ಜಾರಿಗೊಳಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಕೇರಳದಲ್ಲಿ ಬಿಜೆಪಿಗೆ 1 ಸ್ಥಾನ ಬಾರದೇ ಇದ್ದರೂ ಕ್ಷೇತ್ರದ ಪ್ರಗತಿ ಮುಖ್ಯ ಎಂಬ ಮೋದಿ ಧೋರಣೆಯೆಲ್ಲಿ, ಮೋದಿಗೆ ವೋಟ್ ಹಾಕ್ತೀರಾ ಎಂದು ಬೊಬ್ಬಿಡುತ್ತಿರುವ ಮೈತ್ರಿ ಪಕ್ಷಗಳ ಮುಖಂಡರ ಮನಸ್ಥಿತಿಯೆಲ್ಲಿ ಎಂದು ಪ್ರಶ್ನಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮನುಮುತ್ತಪ್ಪ, ರಾಜ್ಯ ಕಾರ್ಯದರ್ಶಿ ರಾಬಿನ್ ದೇವಯ್ಯ, ಮೈಸೂರಿನ ರಾಜೇಂದ್ರ, ಕಾಂತಿ ಸತೀಶ್, ರೀನಾ ಪ್ರಕಾಶ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುಜಾಕುಶಾಲಪ್ಪ, ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಸದಸ್ಯತ್ವ ಅಭಿಯಾನದ ಸಂಚಾಲಕ ಶಾಂತೆಯಂಡ ರವಿಕುಶಾಲಪ್ಪ, ಜಿಲ್ಲಾ ಉಸ್ತುವಾರಿ ಉದಯಕುಮಾರ್ ಶೆಟ್ಟಿ, ಮಡಿಕೇರಿ ಬಿಜೆಪಿ ಅಧ್ಯಕ್ಷ ಮಹೇಶ್ ಜೈನಿ, ಕಾರ್ಯದರ್ಶಿ ಬಿ.ಕೆ.ಅರುಣ್, ಮಡಿಕೇರಿ ಮಹಿಳಾ ಬಿಜೆಪಿ ಅಧ್ಯಕ್ಷೆ ಅನಿತಾ ಪೂವಯ್ಯ, ಜಿ.ಪಂ. ಸದಸ್ಯರಾದ ಮುರಳಿ ಕರಂಬಮ್ಮಯ್ಯ ಕಿರಣ್ ಕಾರ್ಯಪ್ಪ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಕಾರ್ಯಾಗಾರದಲ್ಲಿ ಹಾಜರಿದ್ದರು.
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…
ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…