ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಲಾಕ್ಡೌನ್ ಘೋಷಿಸಲಾಗಿದೆ. ಆದರೆ ಜಿಲ್ಲಾಡಳಿತ ಹೊರಡಿಸಿರುವ ಆದೇಶದ ಮಾರ್ಗಸೂಚಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ವಿನಾಯಿತಿ ನೀಡಿರುವ ಹಿನ್ನೆಲೆಯಲ್ಲಿ ಎಂದಿನಂತೆ ಶನಿವಾರ ಮತ್ತು ಭಾನುವಾರಗಳಂದು ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಅಗತ್ಯ ಸೇವೆಯಲ್ಲೊಂದಾದ ನಂದಿನ ಹಾಲು ಮತ್ತು ಹಾಲಿನ ಉತ್ಪನ್ನಗಳು ಸಾಕಷ್ಟು ಪ್ರಮಾಣದಲ್ಲಿ ಡೀಲರ್ ಕೇಂದ್ರಗಳಲ್ಲಿ ದೊರೆಯುತ್ತದೆ. ಈ ಬಗ್ಗೆಯಾವುದೇ ಗೊಂದಲ ಅಗತ್ಯವಿಲ್ಲ, ಗ್ರಾಹಕರು ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನ ಖರೀದಿ ಮಾಡಬಹುದು ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel