ಮಡಿಕೇರಿ :ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವ ಕೊಡಗಿನ ಮಳೆಹಾನಿ ಸಂತ್ರಸ್ತ ಸಾಲಗಾರರ ಕನಿಷ್ಠ 20 ಸಾವಿರ ರೂ. ಸಾಲವನ್ನು ಮನ್ನಾ ಮಾಡಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.
ಧರ್ಮಾಧಿಕಾರಿಗಳಿಗೆ ಪತ್ರ ಬರೆದಿರುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಸಾಲಮನ್ನಾ ಮಾಡುವ ಮೂಲಕ ಜಿಲ್ಲೆಯ ನೆರೆ ಸಂತ್ರಸ್ತರ ನೆರವಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.ಪ್ರವಾಹ ಪರಿಹಾರಕ್ಕಾಗಿ ಧರ್ಮಾಧಿಕಾರಿಗಳು ಮುಖ್ಯಮಂತ್ರಿಗಳ ನಿಧಿಗೆ 25 ಕೋಟಿ ರೂ.ಗಳನ್ನು ನೀಡಿರುವುದು ಸ್ವಾಗತಾರ್ಹ. ಇದೇ ರೀತಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡುವ ಅನಿವಾರ್ಯತೆಯೂ ಎದುರಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಮಂದಿ ಭವಿಷ್ಯವನ್ನೇ ಕಳೆದುಕೊಂಡಿದ್ದಾರೆ. 700 ಕ್ಕೂ ಅಧಿಕ ಕುಟುಂಬಗಳು ನೆಲೆ ಕಳೆದುಕೊಂಡು ಆಶ್ರಯವಿಲ್ಲದೆ ಅತಂತ್ರ ಸ್ಥಿತಿಯನ್ನು ಅನುಭವಿಸುತ್ತಿವೆ. ಅನೇಕರು ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ.
ಜಿಲ್ಲೆಯ ಅನೇಕ ಬಡ ಕುಟುಂಬಗಳು ಹಾಗೂ ಕೂಲಿ ಕಾರ್ಮಿಕರೇ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದಿರುವುದರಿಂದ ಮಹಾಮಳೆ ತಂದೊಡ್ಡಿರುವ ಕರುಣಾಜನಕ ಪರಿಸ್ಥಿತಿಯನ್ನು ಧರ್ಮಾಧಿಕಾರಿಗಳು ಪರಿಗಣಿಸಿ ಸಂತ್ರಸ್ತ ಸಾಲಗಾರರ ಸಾಲಮನ್ನಾ ಮಾಡಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿದ್ದಾರೆ.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…