Advertisement
ಸುದ್ದಿಗಳು

ಸಂಪಾಜೆಯಲ್ಲಿ “ಸ್ವಚ್ಛ ಭಾರತ ಸಪ್ತಾಹ-2019”

Share
ಸಂಪಾಜೆ: ನೆಹರು ಯುವ ಕೇಂದ್ರ ಕೊಡಗು, ಗ್ರಾಮ ಪಂಚಾಯತ್ ಸಂಪಾಜೆ ಕೊಡಗು, ಗ್ರಾಮ ಪಂಚಾಯತ್ ಚೆಂಬು ಕೊಡಗು, ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ ಇವುಗಳ ಸಂಯುಕ್ತಾಶ್ರಯದಲ್ಲಿ  “ಸ್ವಚ್ಛ ಭಾರತ ಸಪ್ತಾಹ-2019”  ಅಂಗವಾಗಿ ಸ್ವಚ್ಛತೆಯ ಕುರಿತು ಬೀದಿ ನಾಟಕ ಕಾರ್ಯಕ್ರಮ ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಚೆಂಬು ಗ್ರಾಪಂ ಅಧ್ಯಕ್ಷ  ದಿನೇಶ್ ಯು.ಕೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಪಾಜೆ ಎಜುಕೇಶನ್ ಸೊಸೈಟಿ ಸಂಚಾಲಕ ಶಂಕರನಾರಯಣ ಭಟ್ ವಹಿಸಿದ್ದರು. ಮುಖ್ಯಅತಿಥಿಗಳಾಗಿ ನೇತಾಜಿ ಗೆಳೆಯರ ಬಳಗ ಚೆಡಾವು ಇದರ ಸ್ಥಾಪಕ ಅಧ್ಯಕ್ಷ  ಸುರೇಶ್ ಪಿ.ಎಲ್,ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ  ಮಾಲತಿ ವೈ.ಕೆ,  ಸಂಯುಕ್ತ ಪ್ರೌಢ ಶಾಲೆ ಮುಖ್ಯ ಶಿಕ್ಷಕ  ಐತ್ತಪ್ಪ, ರಾಷ್ಟ್ರೀಯ ಯುವ ಕಾರ್ಯಕರ್ತ ಸಂತೋಷ್ ಕುಮಾರ್ ಹೆಚ್.ಬಿ,,ರಾಷ್ಟ್ರೀಯ ಯುವ ಕಾರ್ಯಕರ್ತ  ಚರಣ್ ಬಿ.ಜೆ ಭಾಗವಹಿ‌ಸಿದ್ದರು.
ವೈ.ಕೆ ಮಾಲತಿ  ಸ್ವಾಗತಿಸಿ  ಪಿ.ಎಲ್ ಸುರೇಶ್ ವಂದಿಸಿದರು.  ಸಭಾಕಾರ್ಯಕ್ರಮದ ನಂತರ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇದರ  ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ ಸ್ವಚ್ಛತೆ ಕುರಿತು ಬೀದಿ ನಾಟಕ ಪ್ರದರ್ಶನ ನಡೆಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

13 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

22 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

23 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago