ಸಂಪಾಜೆ: ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡಮಿಯ ಮಾಜಿ ಅಧ್ಯಕ್ಷ ಎನ್.ಎಸ್. ದೇವಿಪ್ರಸಾದ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್, ಚೆಂಬು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಉರುಬೈಲು, ಸುಬ್ರಮಣ್ಯ ಉಪಾಧ್ಯಾಯ, ಸಂಪಾಜೆ ಎಜ್ಯುಕೇಶನ್ ಸೊಸೈಟಿಯ ಶಂಕರನಾರಾಯಣ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವರ್ತಕರಾದ ಬಿ.ಆರ್.ಪದ್ಮಯ್ಯ, ಶಿಕ್ಷಕರಾದ ಐತಪ್ಪ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹರಿಕಥೆ, ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ಗಾಯನ, ಸಮೂಹ ನೃತ್ಯ, ಡೊಳ್ಳು ಕುಣಿತ, ಕಂಸಾಳೆ, ಸುಗಮ ಸಂಗೀತ, ಜಾನಪದ ನೃತ್ಯ, ಜನಪದ ಗಾಯನ, ವಚನ ಗಾಯನ ನಡೆಯಿತು. ಷಡಕ್ಷರಯ್ಯ ರವರ ನಾಡಗೀತೆಯೊಂದಿಗೆ ಕಾರ್ಯಕ್ರಮ ಪ್ರಾಂಭಿಸಲಾಯಿತು, ಶಿಕ್ಷಕ ಎಚ್.ಜಿ ಕುಮಾರ್ ನಿರೂಪಿಸಿ, ಇಲಾಖೆಯ ಮಣಜೂರು ಮಂಜುನಾಥ್ ವಂದಿಸಿದರು.