ಸಂಪಾಜೆ: ಕೊಯನಾಡಿನಲ್ಲಿ ಮಹಾಶಿವರಾತ್ರಿ ಉತ್ಸವ

February 25, 2020
11:16 AM

ಸಂಪಾಜೆ: ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ನಡೆಯಿತು.

Advertisement

ಕೊಯನಾಡು ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಶ್ರೀ ಗಣೇಶ ಯುವ ಬಳಗ ಇದರ ಆಶ್ರಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಸ್ಥಳೀಯರಿಗೆ ಕ್ರೀಡೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕ್ರೀಡೋತ್ಸವದ ಧ್ವಜಾರೋಹಣವನ್ನು ದೇವಸ್ಥಾನದ ಅಧ್ಯಕ್ಷರಾದ ಪಿ.ಡಿ.ವಿಶ್ವನಾಥ್ ನೆರವೇರಿಸಿದರು ಹಾಗೂ ಸಂಪಾಜೆ ಗ್ರಾಮ ಅಭಿವೃದ್ಧಿಯ ಹರಿಕಾರ ದಿವಂಗತ ಬಾಲಚಂದ್ರ ಕಳಗಿರವರ ಸ್ಮರಣೆ ಮಾಡುತ್ತ ಸ್ಥಳೀಯ ರಸ್ತೆಗಳಿಗೆ ನಾಮಪಲಕವನ್ನು ನಿರ್ಮಾಣ ಮಾಡಿ ನಾಮಪಲಕದ ಅನಾವರಣವನ್ನು ಬಾಲಚಂದ್ರ ಕಳಗಿಯವರ ತಂದೆಯವರಾದ ಕಳಗಿ ವೆಂಕಪ್ಪರವರು ಫಲಕ ಅನಾವರಣ ನೆರವೇರಿಸಿದರು. ನಂತರ ಸ್ಥಳೀಯರಿಗೆ ಕ್ರೀಡಾಕೂಟ ನೆರವೇರಿತು. ಶ್ರೀ ದೇವರಿಗೆ ದೀಪಾರಾಧನೆಗೊಂಡು ಸಂಜೆ ಸಭಾ ಕಾರ್ಯಕ್ರಮವು ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷರಾದ ಪೆಲತಡ್ಕ ವಿಶ್ವನಾಥ್ ರವರ ಅಧ್ಯಕ್ಷತೆಯಲ್ಲಿ ನಡೆಯತು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಮಹಾಗಣಪತಿ ದೇವಸ್ಥಾನದ ಮಾಜಿ ಅಧ್ಯಕ್ಷರಾದ ಉಲ್ಲಾಸ್ ಕೇನಾಜೆ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್, ದೇವತಾರಾಧನ ಸಮಿತಿಯ ಅಧ್ಯಕ್ಷರಾದ ಬಿ.ಆರ್.ಶಿವರಾಮ್, ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಬಿ  ಆರ್ ಸುಂದರ್ , ಗಣೇಶ ಯುವ ಬಳಗದ ಅಧ್ಯಕ್ಷರಾದ ಪರ್ಮಲೆ ಜಗದೀಶ್, ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ರಾಜಾರಾಮ್ ಕಳಗಿ, ಅರೇಕಲ್ಲು ಶ್ರೀ ಅಯ್ಯಪ್ಪ ದೇವಸ್ಥಾನದ ಅಧ್ಯಕ್ಷರಾದ  ಸುಂದರ.ಎ. ಕೆ, ದೇವರಕೊಲ್ಲಿ ಚಾಮುಂಡೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ಕುಂಞರಾಮ, ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷರಾದ ಸೇಂದಿಲ್ ಕುಮಾರ್, ಚೆಡಾವು ಬಾಲಸುಬ್ರಮಣ್ಯ ದೇವಸ್ಥಾನದ ಅಧ್ಯಕ್ಷರಾದ ಸುಬ್ರಹ್ಮಣ್ಯ ಸ್ವಾಮಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಪುಷ್ಪಾವತಿ, ಗಣೇಶ್ ಯುವ ಬಳಗದ ಮಾಜಿ ಅಧ್ಯಕ್ಷರಾದ ನವೀನ್ ಕುಮಾರ್, ಅದ್ವೈತ ಹುಂಡಾಯಿ ಮಡಿಕೇರಿಯ ವ್ಯವಸ್ಥಾಪಕರಾದ ವೀರೇಂದ್ರ ಕೇನಾಜೆ, ಮೊದಲಾದವರು ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ದೇರಣ್ಣ ದೇವರಗುಂಡ, ನಡುಬೆಟ್ಟು ಪುಟ್ಟಪ್ಪ, ಪೆಲತಡ್ಕ ದಿನೇಶ್, ದೇವರಗುಂಡ ಲಿಂಗಪ್ಪರವರನ್ನು ಯುವ ಬಳಗದ ವತಿಯಿಂದ ಸನ್ಮಾನಿಸಲಾಯಿತು. ರಾತ್ರಿ ಹಿಂದೂ ಜನಜಾಗೃತಿ ಸಮಿತಿ ಸಾಧಕರಿಂದ ಧಾರ್ಮಿಕ ಉಪನ್ಯಾಸ ಹಾಗೂ ವಿವಿಧ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ಶ್ರೀ ರಾಗ್ ಮ್ಯೂಸಿಕ್ ಪುತ್ತೂರು ಇವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ
ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”
April 17, 2025
10:44 AM
by: ದ ರೂರಲ್ ಮಿರರ್.ಕಾಂ
ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |
April 16, 2025
7:52 AM
by: The Rural Mirror ಸುದ್ದಿಜಾಲ
ಕುರುವಾವ್ ಕರುಪ್ ಆಜ್ಞೆಯಂತೆ ಅಗ್ನಿ ಸೇವೆ ಮಾಡುವ ಮಹಾವಿಷ್ಣುಮೂರ್ತಿ
April 12, 2025
12:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group