Advertisement
ಸುದ್ದಿಗಳು

ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ

Share

ಸುಳ್ಯ: ಸಂಪಾಜೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂಡಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು. ಸಭೆ ಸಮಾರಂಭಗಳ ಕಸ, ಪ್ಲಾಸ್ಟಿಕ್ ವಸ್ತುಗಳನ್ನು ಸಾರ್ವಜನಿಕ ಸ್ಥಳದಲ್ಲಿ ಎಸೆಯುವವರ ಮೇಲೆ ದಂಡನೆ ವಿಧಿಸಲು ನರ್ಧರಿಸಲಾಯಿತು. ಬಂಟೋಡಿ ಮುಳ್ಳುಕುಂಜ ಗುಂಪು ಮನೆಗಳಿಗೆ ಕುಡಿಯುವ ನೀರಿನ ಹೊಸ ಬೋರ್‌ವೆಲ್ ವ್ಯವಸ್ಥೆಗೆ, ಸಾರ್ವಜನಿಕ ಕುಡಿಯುವ ನೀರಿನ ಬಾವಿಗಳಾದ ದಂಡೆಕಜೆ, ಕೀಲಾರುಮೂಲೆ, ಕಲ್ಲುಗುಂಡಿ, ಪೇರಡ್ಕ, ದರ್ಖಾಸ್ತು ಬಾವಿಗಳ ಹೂಳೆತ್ತಲು ಜಿಲ್ಲಾ ಪಂಚಾಯತ್‌ಗೆ ಬರೆಯಲು ನಿರ್ಧರಿಸಲಾಯಿತು.

ಸಾರ್ವಜನಿಕ ಸ್ಥಳಗಳಲ್ಲಿ ಅಲೆಮಾರಿ ದನಗಳು ಹೆಚ್ಚಾಗಿದ್ದು, ಸಾರ್ವಜನಿಕರು ಅವರವರ ದನಗಳನ್ನು ಸಾರ್ವಜನಿಕ ಸ್ಥಳಗಳಿಗೆ ರಸ್ತೆಗಳಿಗೆ ಬಿಡುವಂತಿಲ್ಲ. ದನಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಲು ಸೂಚನೆ ನೀಡಲು ನಿರ್ಧರಿಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆಗೆ ದನಗಳು ಬಂದು ಅಪಾಯ ಸಂಭವಿಸುವುದರಿಂದ ಅಂತಹ ದನಗಳನ್ನು ಹಿಡಿದು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. 2018-19 ನೇ ಸಾಲಿನಲ್ಲಿ 20 ಮನೆಗಳು ಮಂಜೂರಾಗಿದ್ದು, ಮಂಜೂರಾದ ಫಲಾನುಭವಿಗಳಿಗೆ ಆದೇಶ ಪತ್ರ ನೀಡಿರುವುದಿಲ್ಲ. ಹಾಗೂ ಹೊಸ ಮನೆ ಇವರಿಗೆ ಬಂದಿಲ್ಲ, ಬಡವರಿಗೆ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗುತ್ತಿಲ್ಲ, ಈ ಬಗ್ಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರಿಗೆ ತಿಳಿಸಲು ನಿರ್ಧರಿಸಲಾಯಿತು.

ಸಾರ್ವಜನಿಕ ಸ್ಥಳಗಳಲ್ಲಿ ಸಾಂಕ್ರಾಮಿಕ ರೋಗಗಳು ಬಾರದ ರೀತಿಯಲ್ಲಿ ವ್ಯಾಪಾರ ಮಾಡುವಂತೆ ತಿಳುವಳಿಕೆ ನೀಡಲು ಸಭೆಯಲ್ಲಿ ನಿರ್ಣಯಿಸಲಾಯಿತು. ಗ್ರಾಮ ಪಂಚಾಯತ್‌ನ ಮನೆತೆರಿಗೆ, ವ್ಯಾಪಾರ ಪರವಾನಿಗೆ, ಸ್ವಚ್ಚತಾ ಕರ, ನೀರಿನ ಕರ, ಕಟ್ಟುನಿಟ್ಟಾಗಿ ವಸೂಲಿ ಮಾಡುವುದು, ಈ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಬೀದಿಗಳಲ್ಲಿ ಕಸ ಎಸೆಯುವ ಬಗ್ಗೆ ದ್ವನಿವರ್ಧಕದ ಮೂಲಕ ಪ್ರಚಾರಪಡಿಸುವುದು ಎಂದು ತೀರ್ಮಾನಿಸಲಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಜಲಾಮೃತ ಯೋಜನೆಯಡಿ ಆಯ್ಕೆಯಾಗಿದ್ದು ಈ ಯೋಜನೆಯಡಿ ಕೃಷಿಕರಿಗೆ ತಡೆಗೋಡೆ, ಕಿಂಡಿ ಅಣೆಕಟ್ಟು ಇನ್ನಿತರ ಯೋಜನೆ ಜಾರಿಯಲ್ಲಿದ್ದು, ಕೃಷಿ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಲು ಸಭೆಯಲ್ಲಿ ಸೂಚಿಸಲಾಯಿತು.
ಈ ಸಭೆಯಲ್ಲಿ ಸದಸ್ಯರಾದ ಯಶೋದ ಕೆ.ಕೆ, ಆಶಾ ಎಂ.ಕೆ, ಲೆತಿಶ್ಯಾ ಡಿಸೋಜ, ಹಮೀದ್ ಜಿ.ಕೆ, ಸೋಮಶೇಖರ್ ಕೊಯಿಂಗಾಜೆ, ಅಬುಶಾಲಿ ಪಿ.ಕೆ, ನಾಗೇಶ್ ಪಿ.ಆರ್, ಷಣ್ಮುಗಂ ಎಸ್. ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

6 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

6 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

17 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

22 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

22 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

23 hours ago