ಸಂಪಾಜೆ ಘಾಟಿ ಪ್ರದೇಶದಲ್ಲಿ ಧಾರಾಕಾರ ಮಳೆ : ಉಕ್ಕಿ ಹರಿಯುತ್ತಿರುವ ಪಯಸ್ವಿನಿ ನದಿ

August 6, 2019
9:09 PM

ಸುಳ್ಯ: ಸಂಪಾಜೆ ಸೇರಿದಂತೆ ಘಾಟಿ ಪ್ರದೇಶದಲ್ಲಿ ಹಾಗೂ ಸುಳ್ಯ, ಸಂಪಾಜೆ, ಅರಂತೋಡು ಪರಿಸರದಲ್ಲಿ ಎರಡು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದೆ. ಈ ಕಾರಣದಿಂದ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು ಅರಂಬೂರು ಪ್ರದೇಶದಲ್ಲಿ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ.

 

 

ಸಂಪಾಜೆ ಪ್ರದೇಶದಿಂದ ಮುಂದಿನ ಘಾಟಿ ಪ್ರದೇಶದಲ್ಲಿ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿದೆ. ಕಳೆದ ಬಾರಿಯ ಜಲಪ್ರಳಯದ ಸಂದರ್ಭ ಕೊಚ್ಚಿ ಹೋದ ಮಣ್ಣು  ಈಗಲೂ ನೀರಿನೊಂದಿಗೆ ಮಿಶ್ರವಾಗಿ ಬರುತ್ತಿದೆ. ಮಂಗಳೂರು ಮಡಿಕೇರಿ ರಸ್ತೆಯ ಮದೆನಾಡು ಪ್ರದೇಶದಿಂದ ಆರಂಭವಾಗಿ ಜೋಡುಪಾಲ ಹಾಗೂ ಅದಕ್ಕಿಂತಲೂ ಕಳಗಿನ ಭಾಗದಿಂದಲೇ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿದೆ. ಹೀಗಾಗಿ ಪಯಸ್ವಿನಿ ನದಿಯಲ್ಲೂ ನೀರು ಉಕ್ಕಿ ಹರಿಯುತ್ತಿದೆ. ಇದೇ ರೀತಿ ನೀರು ಹರಿದರೆ ಸುಳ್ಯ ಮಡಿಕೇರಿ ರಸ್ತೆ ಮುಳುಗಿ ಸಂಚಾರ ಸ್ಥಗಿತವಾಗಬಹುದು ಎಂದು ಸ್ಥಳೀಯರು ಹೇಳುತ್ತಾರೆ.

 

ಜೋಡುಪಾಲ ಬಳಿ ಹರಿದು ಬರುತ್ತಿರುವ ನೀರು…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್
ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್
ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು
May 3, 2026
6:56 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror