ಸಂಪಾಜೆ-ಮಡಿಕೇರಿ ಹೆದ್ದಾರಿ ಬಿರುಕಿಗೆ ತಾತ್ಕಾಲಿಕ ತೇಪೆ : ಸದ್ಯ ವಾಹನ ಸಂಚಾರ ನಿರಾತಂಕ

July 5, 2019
9:38 PM

ಮಡಿಕೇರಿ : ಮಡಿಕೇರಿ -ಸಂಪಾಜೆ- ಮಂಗಳೂರು ರಸ್ತೆಯಲ್ಲಿ  ಕಾಟಿಕೇರಿ ಬಳಿ ರಸ್ತೆಯಲ್ಲಿ ಬಿರುಕು ಬಿಟ್ಟಿರುವುದಕ್ಕೆ ತಾತ್ಕಾಲಿಕ ಕ್ರಮ ಕೈಗೊಳ್ಳಲಾಗಿದ್ದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಭೇಟಿ ನೀಡಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಶಾಸಕರುಗಳಾದ ಅಪ್ಪಚ್ಚು ರಂಜನ್ ಹಾಗೂ   ಕೆ ಜಿ ಬೋಪಯ್ಯ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement

ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದಂತೆಯೇ ಮಡಿಕೇರಿ -ಸಂಪಾಜೆ- ಮಂಗಳೂರು ರಸ್ತೆಯ ಕಾಟಿಕೇರಿ ಬಳಿ ರಸ್ತೆಯಲ್ಲಿ ಬಿರುಕು ಬಿಟ್ಟಿತ್ತು. ಹೀಗಾಗಿ ಶುಕ್ರವಾರ ಸ್ಥಳಕ್ಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಯ ಮೇಲೆ ನೀರು ಹರಿಯದಂತೆ ಸ್ಯಾಂಡ್ ಬಂಡ್‍ಗಳನ್ನು ಅಳವಡಿಸಿ ರಸ್ತೆ ಕುಸಿಯದಂತೆ ಕ್ರಮಕೈಗೊಳ್ಳಲಾಗಿದೆ. ಭಾರೀ ವಾಹನಗಳ ಸಂಚಾರದ ಮಾರ್ಗವನ್ನು ಈಗಾಗಲೇ ಬದಲಾಯಿಸಲಾಗಿದ್ದು, ರಸ್ತೆಯ ಅರ್ಧಭಾಗದ ಮೂಲಕ ಇತರ ವಾಹನಗಳು ಸಂಚರಿಸುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್‍ಗಳನ್ನು ಅಳವಡಿಸಿ ಪೊಲೀಸರು ನಿಗಾ ವಹಿಸಿದ್ದಾರೆ. ಹೆದ್ದಾರಿಯ ಎರಡೂ ಬದಿಗಳಲ್ಲಿ ಜೆ.ಸಿ.ಬಿ ಬಳಸಿ, ಚರಂಡಿಗಳನ್ನು ತೆಗೆಯಲಾಗುತ್ತಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಘಟಕದ ಅಭಿಯಂತರರೊಂದಿಗೆ ಸಮಾಲೋಚಿಸಿದರು. ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

Advertisement

 

Advertisement

 

ಶಾಸಕದ್ವಯರ ಭೇಟಿ: 

Advertisement

ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚು ರಂಜನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಚರಂಡಿ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ರಸ್ತೆ ದುರಸ್ತಿ ಸಂದರ್ಭ ಅಳವಡಿಸಿಕೊಳ್ಳಲಾದ ತಂತ್ರಜ್ಞಾನದ ಬಗ್ಗೆ ಶಾಸಕರು ಮಾಹಿತಿ ಪಡೆದರು. ಕುಸಿದಿರುವ ಸ್ಥಳದಲ್ಲಿ ಕಾಂಕ್ರೀಟ್ ತಡೆಗೋಡೆ ಮತ್ತು ಕಾಂಕ್ರೀಟ್ ಒಳಚರಂಡಿ ವ್ಯವಸ್ಥೆ ಮಾಡಬೇಕೆಂದರು. ಯಾವುದೇ ಕಾರಣಕ್ಕೂ ವಾಹನಗಳ ಸಂಚಾರಕ್ಕೆ ತಡೆಯಾಗದಂತೆ ನೋಡಿಕೊಳ್ಳಬೇಕೆಂದು ಶಾಸಕರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಸೂಚಿಸಿದರು.

ಈ ಸಂದರ್ಭ ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಕಾಟಿಕೇರಿ ಗ್ರಾಮಸ್ಥರು ಹಾಜರಿದ್ದರು.

Advertisement

 

Advertisement

ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ,

ಕಳೆದ ಬಾರಿ ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಮಳೆ ಸುರಿದು ಮೈಸೂರು ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಗೆ ಹಾನಿಯಾಗಿತ್ತು. ಬಳಿಕ ಹೆದ್ದಾರಿ ಪ್ರಾಧಿಕಾರದಿಂದ ರಸ್ತೆಗಳನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗಿದೆ. ಆದರೆ ಶಾಶ್ವತ ಯೋಜನೆ ರೂಪಿಸಲು ಹೆಚ್ಚುವರಿ 45 ಕೋಟಿ ರೂ.ಗಳ ಅನುದಾನ ಅಗತ್ಯವಿದ್ದು, ಚುನಾವಣಾ ನೀತಿ ಸಂಹಿತೆ ಮತ್ತಿತ್ತರ ಕಾರಣಗಳಿಂದ ಈ ಹಣ ಬಿಡುಗಡೆಯಾಗಲು ವಿಳಂಬವಾಗಿದೆ.  ಈ ಕುರಿತು ಸಂಸದ ಪ್ರತಾಪ್ ಸಿಂಹ ಅವರ ಗಮನ ಸೆಳೆದಿದ್ದು, ಪ್ರಸ್ತುತ ಈ ಮನವಿ ಕೇಂದ್ರ ಸರಕಾರದ ಬಳಿ ಇದೆ. ಈ ಅನುದಾನ ಬಿಡುಗಡೆಯಾದ ಬಳಿಕ ಶಾಶ್ವತ ಕಾಮಗಾರಿಗಳು ಆರಂಭವಾಗುತ್ತದೆ ಎಂದು ತಿಳಿಸಿದರು.

Advertisement

ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ,

ಸ್ಯಾಂಡ್ ಬಂಡ್ ಮತ್ತು ಕಾಂಕ್ರೀಟ್ ಬಳಸಿ ಹೆಚ್ಚಿನ ಅನಾಹುತವಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಕುಸಿಯದಂತೆ ಹೆದ್ದಾರಿ ಬದಿಯಲ್ಲಿ ಕಾಂಕ್ರಿಟ್ ವಾಲ್ ನಿರ್ಮಿಸಿದರೇ ಶಾಶ್ವತ ಪರಿಹರ ದೊರೆಯಲಿದೆ ಎಂದರು.  ಕಳೆದ ಬಾರಿ ಮರಳಿನ ತಡೆಗೋಡೆ ನಿರ್ಮಿಸುವ ಸಂದರ್ಭ ನಾನು ಆಕ್ಷೇಪ ವ್ಯಕ್ತಪಡಿಸಿ ಕೊಡಗಿನ ವಾತಾವರಣಕ್ಕೆ ಇದು ಸೂಕ್ತವಲ್ಲವೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದೆ. ಆದರೆ ಅಧಿಕಾರಿಗಳು ತಮ್ಮದೇ ಆದ ಕಾರಣಗಳನ್ನು ನೀಡಿ ಮರಳಿನ ಮೂಟೆಗಳನ್ನು ಇಟ್ಟರು. ಇದೀಗ ಮತ್ತೆ ರಸ್ತೆ ಬಿರುಕು ಕಾಣಿಸಿಕೊಂಡಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Advertisement

 

 

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror