ಬೆಂಗಳೂರು: ಉಪಚುನಾವಣೆಯ ಫಲಿತಾಂಶದ ಬಳಿಕ ಹಲವು ಅಡೆ ತಡೆಗಳ ನಂತರ ಇದೀಗ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುಂದಾಗಿದ್ದಾರೆ. ಈ ಬಗ್ಗೆ ಚರ್ಚೆದ ನಡೆಸಲೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದಾರೆ. ಇಂದು ರಾತ್ರಿ 9 ಗಂಟೆಗೆ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲಿರುವ ಬಿ ಎಸ್ ವೈ ಅವರು ನಂತರ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ. ರಾಷ್ಟ್ರೀಯ ಮುಖಂಡರು ಈಗಾಗಲೇ ಮಾಡಿಕೊಂಡಿರುವ ಸಚಿವರ ಪಟ್ಟಿಗೆ ಗ್ರೀನ್ ಸಿಗ್ನಲ್ ನೀಡಿದರೆ ಮುಂದಿನ ವಾರವೇ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಸಚಿವ ಸಂಪುಟ ವಿಸ್ತರಣೆಯ ವೇಳೆ ಉಪಚುನಾವಣೆಯಲ್ಲಿ ಗೆದ್ದಿರುವ ಬಹುತೇಕ ಶಾಸಕರಿಗೆ ಸಚಿವ ಸ್ಥಾನ ಸಿಗಲಿದ್ದು ಪಕ್ಷದ ಹಿತದೃಷ್ಟಿಯಿಂದ ಹಾಗೂ ಮೂಲ ಬಿಜೆಪಿಗರಿಗೆ ನ್ಯಾಯ ನೀಡಲು ಈಗ ಇರುವ ಕೆಲವು ಸಚಿವರನ್ನು ಕೈಬಿಟ್ಟು ಹೊಸಬರನ್ನು ತೆಗೆದುಕೊಳ್ಳುವ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿದ್ದು ಈಗಿನ ಪಟ್ಟಿಯ ಪ್ರಕಾರ ಉಪಚುನಾವಣೆಯಲ್ಲಿ ಗೆದ್ದಿರುವ 10 ಮಂದಿ ಹಾಗೂ ಹಲವು ಬಾರಿ ಗೆದ್ದಿರುವ ಮೂಲ ಬಿಜೆಪಿಯ 4 ರಿಂದ 5 ಮಂದಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಈ ಪಟ್ಟಿಯಲ್ಲಿ ಸುಳ್ಯದ ಶಾಸಕ ಎಸ್.ಅಂಗಾರ ಅವರ ಹೆಸರೂ ಸದ್ಯ ಇದ್ದು, ತೀರಾ ಒತ್ತಡ ಬಂದರೆ ಬದಲಾವಣೆಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ದಕ್ಷಿಣ ಕನ್ನಡದ ಕೋಟಾ ಹಾಗೂ ಹಲವು ಬಾರಿ ಶಾಸಕರಾಗಿರುವ ಕಾರಣಕ್ಕೆ ಸುಳ್ಯಕ್ಕೆ ಸ್ಥಾನಮಾನ ನೀಡುವ ಆಧಾರದಲ್ಲಿ ಸದ್ಯ ಪಟ್ಟಿಯಲ್ಲಿ ಹೆಸರಿದೆ ಎಂದು ಮೂಲಗಳು ತಿಳಿಸಿವೆ. ಈ ಬಾರಿ ಬೆಂಗಳೂರಿನಲ್ಲಿ ಪಟ್ಟಿ ಅಂತಿಮಗೊಂಡರು ರಾಷ್ಟ್ರೀಯ ನಾಯಕರು ಈ ಪಟ್ಟಿ ವೀಕ್ಷಣೆ ಮಾಡಿ ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳನ್ನೂ ಗಮನದಲ್ಲಿರಿಸಿ ಸಚಿವ ಸ್ಥಾನ ಸಿಗಲಿದೆ. ಸಚಿವ ಸ್ಥಾನ ಕೈತಪ್ಪಿದ ಅಸಮಾಧಾನಗಳನ್ನೂ ಎದುರಿಸಲು ಈ ಬಾರಿ ಪಕ್ಷದ ನಾಯಕರು ಸಿದ್ಧವಾಗಿದ್ದು, ಎಲ್ಲೂ ಪಕ್ಷ ಸಂಘಟನೆಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಬಿ ಎಸ್ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ದೆಹಲಿಯಿಂದ ಬಂದ ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ. ವರಿಷ್ಟರು ಒಪ್ಪಿದರೆ ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.
ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…
ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…
2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…
ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490