Advertisement
ಸುದ್ದಿಗಳು

ಸಂಸದರ ಬೇಡಿಕೆಯಲ್ಲಿ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿಯ ಪ್ರಸ್ತಾಪವಿಲ್ಲ : ನಿರಾಸೆ ವ್ಯಕ್ತಪಡಿಸಿದ ಕ್ರಿಯಾ ಸಮಿತಿ

Share

ಸುಳ್ಯ : ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲ್ವೇ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣದ ಕುರಿತು ಪ್ರಸ್ತಾಪಿಸದೇ ಇರುವುದಕ್ಕೆ ಕಾಞಂಗಾಡ್- ಕಾಣಿಯೂರು ರೈಲ್ವೇ ಹಳಿ ನಿರ್ಮಾಣ ಕ್ರಿಯಾ ಸಮಿತಿ ನಿರಾಸೆ ವ್ಯಕ್ತಪಡಿಸಿದೆ.

ಸುಳ್ಯದ ಜನತೆ ಬಲು ನಿರೀಕ್ಷೆಯಿಂದ ಕಾಯುತ್ತಿರುವ ಕನಸಿನ ಯೋಜನೆಯ ಕುರಿತು ಸಂಸದರ ಬೇಡಿಕೆಯಲ್ಲಿ ಒಂದು ವಾಕ್ಯವನ್ನೂ ಉಲ್ಲೇಖ ಮಾಡದೇ ಇದ್ದುದು ತೀವ್ರ ನಿರಾಸೆ ತಂದಿದೆ ಎಂದು ಕಾಞಂಗಾಡ್-ಕಾಣಿಯೂರು ರೈಲ್ವೇ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಬಿ.ಸುಧಾಕರ ರೈ ಹೇಳಿದ್ದಾರೆ. ಈ ಹಿಂದೆ ಸಂಸದರ ನೇತೃತ್ವದಲ್ಲಿಯೇ ಕ್ರಿಯಾ ಸಮಿತಿಯು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಆದರೆ ಈಗ ಹೊಸ ಸರಕಾರದ ನೂತನ ರೈಲ್ವೇ ಸಚಿವರಿಗೆ ಜಿಲ್ಲೆಯ ರೈಲ್ವೇ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸುವಾಗ ಸಂಸದರು ಕಾಞಂಗಾಡ್-ಕಾಣಿಯೂರು ಹಳಿಯ ಬಗ್ಗೆ ಮರೆತರೇ ಎಂದು ಕ್ರಿಯಾ ಸಮಿತಿಯ ಪದಾಧಿಕಾರಿಗಳು ಪ್ರಶ್ನಿಸಿದ್ದಾರೆ.

ಮನವಿಯಲ್ಲಿ ಈ ಯೋಜನೆಯ ಪ್ರಸ್ತಾಪವನ್ನು ಬಿಟ್ಟಿರುವ ಬಗ್ಗೆ ಸಂಸದರ ಗಮನಕ್ಕೆ ತರಲಾಗುವುದು. ಅಲ್ಲದೆ ಈ ವಿಷಯವನ್ನು ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡರ ಗಮನಕ್ಕೆ ತರಲಾಗಿದ್ದು ಅದಕ್ಕೆ ಅವರು ತ್ವರಿತವಾಗಿ ಸ್ಪಂದಿಸಿದ್ದಾರೆ ಮತ್ತು ಕೇಂದ್ರ ರೈಲ್ವೇ ಸಚಿವರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸುಧಾಕರ ರೈ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

7 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

18 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

18 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

2 days ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago