ಸುಳ್ಯ: ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು. ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿ ಶಾಸಕರೇ ಇದ್ದಾರೆ. ಹೀಗಾಗಿ ಈಗ ಸಚಿವ ಸ್ಥಾನ ಲಭ್ಯವಾಗದೇ ಇರುವುದು ಕ್ಷೇತ್ರದ ಕಾರ್ಯಕರ್ತರಿಗೆ ಮಾಡಿದ ಅನ್ಯಾಯ. ಈ ಕಾರಣದಿಂದ ಸಚಿವ ಸ್ಥಾನ ಲಭ್ಯವಾಗುವವರೆಗೆ ಸುಳ್ಯದಲ್ಲಿ ಪಕ್ಷದ ಎಲ್ಲಾ ಚಟುವಟಿಕೆ ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ. ಮಂಡಲದ ಎಲ್ಲಾ ಕಾರ್ಯಕರ್ತರು ಹಾಗೂ ಪ್ರಮುಖರು ಸಾಮೂಹಿಕವಾಗಿ ತಟಸ್ಥರಾಗುವ ಬಗ್ಗೆ ಯೋಚಿಸಲಾಗುತ್ತಿದೆ. ಈ ಬಗ್ಗೆ ಜಿಲ್ಲೆ ಹಾಗೂ ರಾಜ್ಯದ ಪ್ರಮುಖರಿಗೆ ತಿಳಿಸಲಾಗುತ್ತದೆ ಎಂದು ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…