ಮಂಗಳೂರು: 2019-20ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ(ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌಧ್ದ ಮತ್ತು ಪಾರ್ಸಿ) ಪದವಿ ಪಡೆದಿರುವ 21 ರಿಂದ 30 ವಯೋಮಾನದ ಮಿತಿಯೊಳಗಿನ ಅಭ್ಯರ್ಥಿಗಳಿಗೆ 90 ದಿನಗಳ ಊಟ ಮತ್ತು ವಸತಿಯೊಂದಿಗೆ ಬೆಳಗಾವಿ, ಬೆಂಗಳೂರು, ಮೈಸೂರು, ಕಲ್ಬುರ್ಗಿ, ಧಾರವಾಡ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ದಾವಣಗೆರೆ, ಮಂಗಳೂರು ಕೇಂದ್ರಗಳಲ್ಲಿ ಉಚಿತ ತರಬೇತಿಗಾಗಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 31.
ಅರ್ಜಿಯನ್ನು ಆನ್‍ಲೈನ್ ವೆಬ್‍ಸೈಟ್ ಮೂಲಕ ಸಲ್ಲಿಸಿ ಹಾರ್ಡ್‍ಕಾಪಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮೌಲಾನಾ ಆಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇವರನ್ನು ಸಂಪರ್ಕಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…