ಸುಳ್ಯ: ಸುಳ್ಯ ನಗರದಲ್ಲಿ ಪದೇ ಪದೇ ಉಂಟಾಗುವ ವಿದ್ಯುತ್ ಸಮಸ್ಯೆಯನ್ನು ಕೂಡಲೇ ಸರಿಪಡಿಸಬೇಕು ಎಂದು ನಗರ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯರು ಒತ್ತಾಯಿಸಿದ್ದಾರೆ.
ಮೆಸ್ಕಾಂ ಕಚೇರಿಗೆ ಭೇಟಿ ನೀಡಿದ ಸದಸ್ಯರ ನಿಯೋಗ ಇಂಜಿನಿಯರ್ ಜೊತೆ ಮಾತುಕತೆ ನಡೆಸಿದರು. ನಿರಂತರ ವಿದ್ಯುತ್ ಕಡಿತ ದಿಂದಾಗಿ ನಗರದಲ್ಲಿ ಜನರಿಗೆ ತೀವ್ರ ತೊಂದರೆ ಉಂಟಾಗುತಿದೆ. ಇದನ್ನು ಕೂಡಲೇ ಸರಿಪಡಿಸಬೇಕು. ವಿದ್ಯುತ್ ಲೈನ್ ಗಳಿಗೆ ತಾಗುವ ಮರದ ಗೆಲ್ಲುಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.
ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಬಾಲಕೃಷ್ಣ ರೈ, ಸುಧಾಕರ, ಬುದ್ಧ ನಾಯ್ಕ, ಸರೋಜಿನಿ ಪೆಲ್ತಡ್ಕ, ಶಶಿಕಲಾ ಎ., ಸುಶೀಲಾ ಜಿನ್ನಪ್ಪ, ಪ್ರವಿತಾ ಪ್ರಶಾಂತ್, ವಾಣಿಶ್ರೀ, ಶೀಲಾ ಅರುಣ ಕುರುಂಜಿ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…