ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಇಂಟರ್ನಲ್ ಕ್ವಾಲಿಟಿ ಆಶ್ಯುರೆನ್ಸ್ ಸೆಲ್‍ನ ವತಿಯಿಂದ ಸಮುದಾಯ ಅಭಿವೃದ್ಧಿ ಸರಣಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ವನ ಸಂವರ್ಧನಾ ಕಾರ್ಯಕ್ರಮ ಅಜ್ಜಾವರ ಗ್ರಾಮ ಪಂಚಾಯತ್, ಅರಣ್ಯ ಇಲಾಖೆ ಸಹಕಾರದಲ್ಲಿ ಕಾಂತಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‍ನ ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ಉದ್ಘಾಟಿಸಿದರು. ಉಪ ವಲಯ ಅರಣ್ಯಾಧಿಕಾರಿ, ಯಶೋಧರ ಪಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು. ನಿವೃತ್ತ ಪ್ರಾಂಶುಪಾಲ ಡಾ. ಪ್ರಭಾಕರ ಶಿಶಿಲ ಮುಖ್ಯ ಅತಿಥಿಯಾಗಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಗಿರಿಧರ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯೆ ರೇವತಿ ದೊಡ್ಡೇರಿ ಅಧ್ಯಕ್ಷತೆ ವಹಿಸಿದ್ದರು. ಕಾಂತಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ವನಿತಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಗೀತಾ ಕಾಟಿಪಳ್ಳ, ಬಾಲಕಿಯರ ವಿದ್ಯಾರ್ಥಿ ನಿಲಯ ಮೇಲ್ವಿಚಾರಕಿ ರಾಜೀವಿ, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಜವರೇಗೌಡ, ಹೇಮಂತ್ ಕಾಮತ್ ಅರಂಬೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಕೆ.ಪೂವಪ್ಪಗೌಡ ಸ್ವಾಗತಿಸಿ, ರತ್ನಾವತಿ ಡಿ.ವಂದಿಸಿದರು. ವಿದ್ಯಾರ್ಥಿನಿ ಚೈತ್ರ ಎಂ.ಪಿ. ಕಾರ್ಯಕ್ರಮ ನಿರೂಪಿಸಿದರು