Advertisement
Political mirror

ಸರಕಾರದಿಂದ ನಗರ ಸ್ಥಳೀಯಾಡಳಿತ ಸಂಸ್ಥೆಗಳ ಕಡೆಗಣನೆ- ಕೋಟ ಶ್ರೀನಿವಾಸ ಪೂಜಾರಿ ಆರೋಪ

Share

ಸುಳ್ಯ: ರಾಜ್ಯದಲ್ಲಿರುವ ನಗರ ಸ್ಥಳೀಯಾಡಳಿತ ಸಂಸ್ಥೆಗಳನ್ನು ರಾಜ್ಯ ಸರಕಾರ ಸಂಪೂರ್ಣ ಕಡೆಗಣಿಸಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.
ಯಡಿಯೂರಪ್ಪ ಸರ್ಕಾರ ಇದ್ದ ಸಂದರ್ಭದಲ್ಲಿ ಪ್ರತಿ ನಗರ ಪಂಚಾಯತ್ ಗಳಿಗೆ ಅಭಿವೃದ್ಧಿಗೆ 5 ಕೋಟಿ ವಿಶೇಷ ಅನುದಾನ ನೀಡಿತ್ತು. ಆದರೆ ಸಿದ್ಧರಾಮಯ್ಯ ಮತ್ತು ಕುಮಾರಸ್ವಾಮಿ ಸರಕಾರ ಯಾವುದೇ ಅನುದಾನ ನೀಡದೆ ಕಡೆಗಣಿಸಿದೆ. ಇದು ನಗರಗಳ ಅಭಿವೃದ್ಧಿಗೆ ತೊಡಕಾಗಿದೆ. 109 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಎಂಟು ತಿಂಗಳಾದರೂ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಸಲು ಸರಕಾರ ಕ್ರ‌ಮ ಕೈಗೊಂಡಿಲ್ಲ. ಇದರಿಂದ ರಾಜ್ಯ ಸರಕಾರ ಜೀವಂತವಾಗಿ ಇದೆಯೇ ಎಂಬ ಸಂಶಯ ಮೂಡುತಿದೆ. ನಗರಾಡಳಿತವನ್ನು ನಿರ್ವಹಿಸುವುದರಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಹೇಳಿದರು.
ಮೈತ್ರಿ ಸರ್ಕಾರ ರೂಪಿಸಿದ್ದಕ್ಕೆ ಕಾಂಗ್ರೆಸ್ ಈಗ ಪಶ್ಚಾತ್ತಾಪ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದ ಅವರು ಎರಡೂ ಪಕ್ಷಗಳ ನಾಯಕರಲ್ಲಿ ಇರುವ ಅಸಮಾಧಾನದಿಂದ ರಾಜ್ಯ ಸರಕಾರ ಕೆಲವೇ ದಿನದಲ್ಲಿ ಪತನಗೊಳ್ಳಲಿದೆ ಎಂದರು. ರೋಷನ್ ಬೇಗ್ ಬಿಜೆಪಿಗೆ ಬಂದರೆ ನಾವು ಖುಷಿ ಪಡುತ್ತೇವೆ. ರೋಷನ್ ಬೇಗ್ ಪಕ್ಷಕ್ಕೆ ಬರುತ್ತಾರಾ ಎಂಬುದನ್ನು ಅವರು ನಿರ್ಧರಿಸಬೇಕು‌. ಅವರು ಬರುವುದಾದರೆ ಅವರ ಸೇರ್ಪಡೆ ಬಗ್ಗೆ ರಾಜ್ಯ ಬಿಜೆಪಿ ನಿರ್ಧಾರ ಕೈಗೊಳ್ಳುತ್ತದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

21 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago