ಸುಬ್ರಹ್ಮಣ್ಯ: ಕಾಂಗ್ರೆಸ್ ಪಕ್ಷದ ಎರಡು ಶಾಸಕರು ಸಲ್ಲಿಸಿದ ರಾಜೀನಾಮೆಯನ್ನು ಸ್ಪೀಕರ್ ಊರ್ಜಿತ ಮಾಡೋದಿಲ್ಲ. ರಾಜ್ಯ ಸರಕಾರ ಸುಭದ್ರವಾಗಿರುತ್ತದೆ. ಸರಕಾರ ಬೀಳಿಸುವ ಬಿಜೆಪಿ ಆಸೆ ಫಲಿಸದು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಶರವಣ ಹೇಳಿದ್ದಾರೆ.
ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಬ್ಬರು ಶಾಸಕರು ರಾಜೀನಾಮೆಯನ್ನು ಸಲ್ಲಿಸಬೇಕಾದ ನಿಯಮವನ್ನು ಪಾಲಿಸಿಲ್ಲ. ಈ ಕಾರಣಕ್ಕಾಗಿ ಸ್ಪೀಕರ್ ಇಬ್ಬರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ.ಇಬ್ಬರು ಶಾಸಕರನ್ನು ಮನವೊಲಿಸುವ ಕಾರ್ಯವನ್ನು ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ ಎಂದ ಅವರು ಸರಕಾರ ಸುಭದ್ರವಾಗಿದ್ದು, ಐದು ವರ್ಷ ಯಾವುದೇ ಅಡ್ಡಿಯಿಲ್ಲದೆ ಪೂರೈಸುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು. ಕಾಂಗ್ರೆಸ್ ನಾಯಕರು ಅವರ ಶಾಸಕರನ್ನು ಏನು ಮಾಡಬೇಕು ಅನ್ನೋದನ್ನ ಮಾಡ್ತಾರೆ, ಜಡಿಎಸ್ ಶಾಸಕರು ದೇವೇಗೌಡರ ಸಂಪರ್ಕದಲ್ಲಿದ್ದಾರೆ ಎಂದ ಅವರು ಸರಕಾರ ಬೀಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ತಂತ್ರ ಫಲಿಸುವುದಿಲ್ಲ. ಕುರ್ಚಿಯ ಆಸೆಗಾಗಿ ಬಿಜೆಪಿ ಪಕ್ಷದವರು ಜಪ ಮಾಡುತ್ತಿದ್ದು, ಅವರ ಆಸೆ ನೆರವೇರುವುದಿಲ್ಲ ಎಂದು ಅವರು ಬಿಜೆಪಿ ವಿರುದ್ಧ ಕಿಡಿ ಕಾರಿದರು.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…