ಸುಳ್ಯ: ಅತ್ಯಂತ ಕ್ಲಿಷ್ಟವಾಗಿದ್ದ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುವ ಉದ್ದೇಶಹೊಂದಿರುವ ಹೊಸ ತೆರಿಗೆ ವ್ಯವಸ್ಥೆಯನ್ನು ಭಾರತದಲ್ಲಿ ಜಾರಿಗೆ ತರಲಾಯಿತು ಮತ್ತು ಹಳೆಯ ವ್ಯವಸ್ಥೆಯಿಂದ ಹೊಸ ತೆರಿಗೆ ವ್ಯವಸ್ಥೆಗೆ ಹೊಂದಿಕೊಳ್ಳಬೇಕಾದರೆ ಅದರ ಸ್ವರೂಪವನ್ನು ಅರ್ಥಮಾಡಿಕೊಳ್ಳುವುದು ಅತೀ ಅಗತ್ಯ ಎಂದು ನೆಹರು ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಪ್ರೊ. ರುದ್ರಕುಮಾರ್ ಹೇಳಿದರು.
ಅವರು ಕಾಲೇಜಿನ ವಾಣಿಜ್ಯ ಸಂಘ ಆಯೋಜಿಸಿದ್ದ ಜಿ ಎಸ್ ಟಿ ಕುರಿತಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಹೊಸ ತೆರಿಗೆ ವ್ಯವಸ್ಥೆಯ ಚಿಂತನೆ ಯಾಕೆ ಬಂತು, ಅದನ್ನು ಯಾವ ರೀತಿಯಾಗಿ ಅಳವಡಿಸುವ ಪ್ರಯತ್ನಗಳು ನಡೆದವು ಮತ್ತು ಒಟ್ಟಾರೆಯಾಗಿ ಹೊಸ ತೆರಿಗೆ ವ್ಯವಸ್ಥೆ ಏನು ಎಂಬುದನ್ನು ಸವಿವರವಾಗಿ ತಿಳಿಯಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ ಭವಿಷ್ಯದ ಉದ್ಯೋಗದ ಅವಕಾಶಗಳನ್ನು ಬಳಸಿಕೊಳ್ಳಬೇಕಾದರೆ ಸಮಯಕ್ಕೆ ಸರಿಯಾಗಿ ಆಗುಹೋಗುಗಳನ್ನು ತಿಳಿದುಕೊಳ್ಳುವುದು ಅಗತ್ಯವಿದೆ ಎಂದರು.
ವೇದಿಕೆಯಲ್ಲಿ ಉಪನ್ಯಾಸಕರಾದ ಸಾವಿತ್ರಿ ಮತ್ತು ಕು. ಹರ್ಷಿತಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧನ್ಯತಾ ಅತಿಥಿಗಳನ್ನು ಪರಿಚಯಿಸಿ, ವಿಸ್ಮಿತ ಸ್ವಾಗತಿಸಿ, ವಿದ್ಯಾರ್ಥಿ ಮೋಕ್ಷಿತ್ ವಂದಿಸಿದರು. ಆಕಾಂಕ್ಷ ಕಾರ್ಯಕ್ರಮ ನಿರ್ವಹಿಸಿದರು.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…