ಸುಳ್ಯ: ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರ್ನಾಟಕ ಘಟಕದ ಕರೆಯ ಮೇರೆಗೆ ಭೂಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯಿದೆ ಹಾಗು ಬೀಜ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ರೈತಾಪಿ ಕೃಷಿ ಉಳಿವಿಗಾಗಿ ಪ್ರತಿ ತಾಲೂಕು ಮಟ್ಟದಲ್ಲಿ ಪ್ರತಿಭಟನಾ ಸಭೆ ನಡೆಸಿ ಸರ್ಕಾರದ ನಿಲುವನ್ನು ಖಂಡಿಸಲಾಗುವುದು.ಅದರ ಜೊತೆ ಜೂ.29 ರಂದು ಸುಳ್ಯ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ಕೃಷಿಕರ ಭೂಮಿಯನ್ನು, ಮಾರುಕಟ್ಟೆ ವ್ಯವಸ್ಥೆಯನ್ನು ಕಾರ್ಪೊರೇಟ್ ಕಂಪೆನಿಗಳ ವಶಕ್ಕೆ ನೀಡುವ ಹುನ್ನಾರ ಅಡಗಿದೆ. ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಖಾಸಗೀಯವರಿಗೆ ಒಪ್ಪಿಸಲು ತಿದ್ದುಪಡಿ ತರಲು ಹೊರಟಿದೆ. ಇದರಿಂದ ಕೃಷಿಕರಿಗೆ ದೊಡ್ಡ ಹೊಡೆತ ನೀಡಲಿದೆ. ಅಗತ್ಯ ವಸ್ತುಗಳ ಕಾಯ್ದೆಗೆ ತಿದ್ದುಪಡಿ ತಂದು ಕಾಳ ಸಂತೆ ಕೋರರು ಅಗತ್ಯ ವಸ್ತುಗಳನ್ನು ದಾಸ್ತಾನು ಹೊಂದಿ ಕೃತಕ ಅಭಾವ ಸೃಷ್ಠಿಸುವ ಸಾಧ್ಯತೆ ಇದೆ. ಕಾರ್ಮಿಕರ ಕಾನೂನುಗಳನ್ನು ತಡೆ ಹಿಡಿದು ಕಾರ್ಮಿಕರ ಹಕ್ಕನ್ನು ಕೇಂದ್ರ ಸರ್ಕಾರ ಕಸಿದುಕೊಂಡಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಮುಖಂಡರಾದ ತೀರ್ಥರಾಮ ಅರಂತೋಡು, ದಿವಾಕರ ಪೈ ಮಜಿಗುಂಡಿ, ಕಾರ್ಮಿಕ ಮುಖಂಡ ಕೆ.ಪಿ.ಜಾನಿ ಕಲ್ಲುಗುಂಡಿ ಮತ್ತಿತರರು ಉಪಸ್ಥಿತರಿದ್ದರು.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…