Advertisement
ಸುದ್ದಿಗಳು

ಸವಣೂರು ಗ್ರಾ.ಪಂ.ನಿಂದ ಸಚಿವ ಈಶ್ವರಪ್ಪ ಅವರಿಗೆ ವಿವಿಧ ಬೇಡಿಕೆ ಈಡೇರಿಸಲು ಮನವಿ

Share

ಸವಣೂರು : ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ ಇಲಾಖೆಯ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಸವಣೂರು ಗ್ರಾ.ಪಂ.ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ಮನವಿ ಸಲ್ಲಿಸಿದರು.

ವಸತಿ ಯೋಜನೆಯ ವಿವಿಧ ಹಂತದ ಕಾಮಗಾರಿಯ ಮನೆಗಳಿಗೆ ಹಣ ಬಿಡುಗಡೆ ಮಾಡಲು, ವಸತಿ ಯೋಜನೆಯಲ್ಲಿ ಹೊಸ ಮನೆಗಳನ್ನು ಒದಗಿಸುವುದು ಮತ್ತು ಅನುದಾನ ಹೆಚ್ಚಳ ಮಾಡುವುದು, ಗ್ರಾ.ಪಂ.ರಸ್ತೆಗಳನ್ನು ಡಾಮರೀಕರಣಗೊಳಿಸಲು ಅನುದಾನ ನೀಡುವಂತೆ, ಸವಣೂರು ರೈಲ್ವೇ ಹಳಿ ದಾಟುವಲ್ಲಿ ಮೇಲಂತಸ್ತಿನ ರಸ್ತೆ ನಿರ್ಮಾಣ ಮಾಡುವುದು, ಬಿಪಿಎಲ್ ಪಡಿತರ ಚೀಟಿ ರದ್ದತಿಯ ಗೊಂದಲದ ಸಮಸ್ಯೆ ಪರಿಹರಿಸುವ ಕುರಿತು, ಗ್ರಾಮ ಪಂಚಾಯತ್‍ಗಳಿಗೆ ಅನುದಾನ ಹೆಚ್ಚಳ ಮಾಡುವಂತೆ, ಗ್ರಾ.ಪಂ.ಅಧ್ಯಕ್ಷರ/ಉಪಾಧ್ಯಕ್ಷರ/ಸದಸ್ಯರ ಗೌರವಧನ ಹೆಚ್ಚಳ ಮಾಡುವಂತೆ, ಸಾರ್ವಜನಿಕ ಕೆರೆಗಳ ಅಭಿವೃದ್ದಿಗೆ ಅನುದಾನ ನೀಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.

ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯೆ ಸುಧಾ ನಾಗರಾಜ್ ನಿಡ್ವಣ್ಣಾಯ, ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ನಾರಾಯಣ ಬಟ್ಟೋಡಿ ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

12 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

1 day ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

1 day ago