ಸವಣೂರು : ಸವಣೂರು ಸರಕಾರಿ ಪ್ರೌಢಶಾಲೆ ಹಾಗೂ ಸವಣೂರು ಪದ್ಮಾಂಬಾ ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿ ಮಂಗಳೂರು ಪಿಂಗಾರ ಕಲಾವಿದರ ತಂಡದಿಂದ ಸವಣೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಸ್ವಚ್ಚತೆಯ ಅರಿವು ಮೂಡಿಸುವ ಬೀದಿನಾಟಕ ನ.8ರಂದು ನಡೆಯಿತು.
ಸ್ವಚ್ಚತೆಯ ಕುರಿತಾಗಿ ಹಸಿಕಸ ಮತ್ತು ಒಣಕಸದಿಂದಾಗುವ ದುಷ್ಟಪರಿಣಾಮಗಳ ಕುರಿತು ಕಸದ ರಾಕ್ಷಸರ ವೇಷಧಾರಿಗಳು ತನ್ನ ಅಭಿನಯದ ಮೂಲಕ ತೋರಿಸಿಕೊಟ್ಟರು. ತ್ಯಾಜ್ಯ ಉತ್ಪಾದನೆಯ ನಿಯಂತ್ರಣ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ವಿವರಿಸಿದರು.
ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಸತೀಶ್ ಬಲ್ಯಾಯ, ಸುಧಾ ನಿಡ್ವಣ್ಣಾಯ, ಮೀನಾಕ್ಷಿ ಬಂಬಿಲ, ವಸಂತಿ ಬಸ್ತಿ, ವೇದಾವತಿ ಅಂಜಯ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ, ಲೆಕ್ಕ ಸಹಾಯಕ ಎ.ಮನ್ಮಥ, ಸಿಬ್ಬಂದಿಗಳಾದ ಪ್ರಮೋದ್ ಕುಮಾರ್ ರೈ ಬಿ, ದಯಾನಂದ ಮಾಲೆತ್ತಾರು, ಜಯಾ ಕೆ, ಜಯಶ್ರೀ ಬಿ, ಶಾರದಾ ಎಂ, ದೀಪಿಕಾ, ಸವಣೂರು ಪ್ರೌಢಶಾಲೆ ಮುಖ್ಯಸ್ಥ ರಘು, ಪ.ಪೂ.ಕಾಲೇಜಿನ ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಹಾಗೂ ಉಪನ್ಯಾಸಕರು, ಆಶಾ ಕಾರ್ಯಕರ್ತೆಯರಾದ ಶಾಲಿನಿ, ಅನಿತಾ, ಅಂಗನವಾಡಿ ಕಾರ್ಯಕರ್ತೆಯರಾದ ಮಮತಾ ಜಿ.ಬಿ ಸವಣೂರು, ಶೇಷಮ್ಮ ಪುಣ್ಚಪ್ಪಾಡಿ, ಆರೋಗ್ಯ ಕಾರ್ಯಕರ್ತೆ ಬಿ.ಗಾಯತ್ರಿ ಮೊದಲಾದವರಿದ್ದರು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…