ಸವಣೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2019-20ನೆ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಮತ್ತು ಜಲ ಶಕ್ತಿ-ಜಲಾಮೃತ ವಾರ್ಷಿಕ ಕ್ರಿಯಾ ಯೋಜನೆಯ ಗ್ರಾಮ ಸಭೆ ಗ್ರಾ.ಪಂ.ಸಭಾಂಗಣದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಪಿ.ಕೆ.ವಿದ್ಯಾರಾಣಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಹಳೆಯ ಬಾವಿ ಮತ್ತು ಕೆರೆಗಳನ್ನು ಪುನಶ್ಚೇತನಗೊಳಿಸಲು ಉದ್ಯೋಗ ಖಾತರಿ ಯೋಜನೆಯಡಿ ಅನುದಾನ ಒದಗಿಸುವಂತೆ ಗ್ರಾಮಸ್ಥರ ವಿನಂತಿಸಿದರು.ಉದ್ಯೋಗ ಖಾತರಿ ಯೋಜನೆಯ ಉಪಯೋಗ ಹಾಗೂ ಕಾರ್ಯಯೋಜನೆಯ ಕುರಿತು ಎಂಜಿನಿಯರ್ ವಿನೋದ್ ಕುಮಾರ್ ಮಾಹಿತಿ ನೀಡಿದರು.
ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಂಯೋಜಕ ಚಂದ್ರಶೇಖರ್ ಅವರು ಉದ್ಯೋಗ ಖಾತರಿ ಯೋಜನೆಯ 2019-20ನೆ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆ ನಡೆಸಿ ಯೋಜನೆಯ ಅನುಷ್ಠಾನದ ಕುರಿತು ವಿವರಿಸಿದರು.ಗ್ರಾ.ಪಂ.ಉಪಾಧ್ಯಕ್ಷ ಬಿ.ಕೆ.ರವಿಕುಮಾರ್,ಸದಸ್ಯರು,ಗ್ರಾಮಸ್ಥರು ಪಾಲ್ಗೊಂಡಿದ್ದರು.
ಗ್ರಾ.ಪಂ.ಲೆಕ್ಕ ಸಹಾಯಕ ಎ.ಮನ್ಮಥ ಸ್ವಾಗತಿಸಿ,ಸಿಬಂದಿ ದಯಾನಂದ ಮಾಲೆತ್ತಾರು ವಂದಿಸಿದರು.ಪ್ರಮೋದ್ ಕುಮಾರ್ ರೈ ನಿರೂಪಿಸಿದರು.