ಸವಣೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸವಣೂರು ಸರಕಾರಿ ಪ.ಪೂ.ಕಾಲೇಜು ಇದರ ವತಿಯಿಂದ ತಾಲೂಕು ಮಟ್ಟದ ಪ.ಪೂ.ವಿಭಾಗದ ಖೋಖೋ ಪಂದ್ಯಾಟ ನಡೆಯಿತು.
ಪಂದ್ಯಾಟವನ್ನು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ ನಿಡ್ವಣ್ಣಾಯ ಅವರು ಉದ್ಘಾಟಿಸಿದರು.ಕಾಲೇಜಿನ ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ರಾಕೇಶ್ ರೈ ಕೆಡೆಂಜಿ,ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ.ಸವಣೂರು,ನಿವೃತ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಮಾಧವ ಬಿ.ಕೆ,ಸವಣೂರು ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಜೈನ್,ಸವಣೂರು ಪ್ರೌಢಶಾಲಾ ಮುಖ್ಯಗುರು ರಘು ಬಿ.ಆರ್ ಉಪಸ್ಥಿತರಿದ್ದರು.
ಗೌರವಾರ್ಪಣೆ
ಇದೇ ಸಂದರ್ಭದಲ್ಲಿ ಸವಣೂರು ಪ್ರೌಢಶಾಲೆಯಲ್ಲಿ ಮುಖ್ಯಗುರುಗಳಾಗಿ ಕರ್ತವ್ಯ ನಿರ್ವಹಿಸಿ ಪೆರ್ನೆ ಬೆಳಿಯೂರು ಪ್ರೌಢಶಾಲೆಗೆ ವರ್ಗಾವಣೆಗೊಂಡ ತಾರಾನಾಥ ರೈ ಅವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು.
ಕಾಲೇಜಿನ ಪ್ರಾಚಾರ್ಯೆ ಪದ್ಮಾವತಿ ಎನ್.ಪಿ ಸ್ವಾಗತಿಸಿ,ಹಿರಿಯ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಅವರು ವಂದಿಸಿದರು.ಉಪನ್ಯಾಸಕ ರಾಜೀವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?