ಸವಣೂರು: ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಮೈಸೂರು ಹಾಗೂ ಎಪಿಎಂಸಿ ಪುತ್ತೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪುತ್ತೂರು ಇದರ ವತಿಯಿಂದ ನ.27ರಂದು ಸವಣೂರು ವಿನಾಯಕ ಸಭಾಂಗಣ ಸವಣೂರು ಇಲ್ಲಿ ನಡೆಯಿತು.
ರೈತರಿಗೆ ಸಂಬಂಧ ಪಟ್ಟ ಪ್ರಮುಖ ಕೃಷಿ ಉತ್ಪನ್ನಗಳ ಬೆಳೆ ಮತ್ತು ಕೃಷಿ ಮಾರಾಟ ವ್ಯವಸ್ಥೆ ಹಾಗೂ ಮಂಡಳಿಯ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ನಿವೃತ್ತ ವ್ಯವಸ್ಥಾಪಕ ಮಾದಯ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಮೈಸೂರು ವಿಭಾಗ ಹಿರಿಯ ವ್ಯವಸ್ಥಾಪಕ ಲೋಕೇಶ್, ಪುತ್ತೂರು ಎಪಿಎಂಸಿ ಕಾರ್ಯದರ್ಶಿ ರಾಮಚಂದ್ರ, ಶ್ರೀ ಕ್ಷೇ.ಧ.ಗ್ರಾಮಾಭಿವೃದ್ದಿ ಯೋಜನೆಯ ಸವಣೂರು ವಲಯ ಮೇಲ್ವಿಚಾರಕಿ ಅಶ್ವಿನಿ ಎಂ.ಜಿ ಉಪಸ್ಥಿತರಿದ್ದರು. ಶ್ರೀ ಕ್ಷೇ.ಧ.ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಅಧಿಕಾರಿ ಉಮೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…