ಸವಣೂರು : ಇಲ್ಲಿನ ಎಸ್.ಎನ್.ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಪೋಷಕರ ಸಮಾವೇಶ ಮತ್ತು ವಿದ್ಯಾರ್ಥಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಅವರು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳನ್ನು ಹೆತ್ತವರು ಹಾಗೂ ಶಿಕ್ಷಕರು ಪ್ರೀತಿಯಿಂದ ನೋಡಿಕೊಳ್ಳಬೇಕು.ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗಾಗಿ ಸಂಸ್ಥೆಯಲ್ಲಿ ಅನೇಕ ವಿನೂತನ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ ಎಂದರು.
ಮುಖ್ಯ ಅತಿಥಿ ಪುತ್ತೂರು ವಕೀಲರ ಸಂಘದ ಪೂರ್ವಾಧ್ಯಕ್ಷ ಕೆ.ಭಾಸ್ಕರ ಕೋಡಿಂಬಾಳ ಮಾತನಾಡಿ,ವಿದ್ಯಾರ್ಥಿಗಳ ಭವಿಷ್ಯವನ್ನು ನಾಲ್ಕು ವಿಧಗಳಾಗಿ ವಿಂಗಡಿಸಬಹುದು. ಮೊದಲನೇಯದಾಗಿ ವಿದ್ಯಾರ್ಥಿಗಳೇ ಸ್ವತಃ ತಮ್ಮ ಭವಿಷ್ಯ ನಿರ್ಮಾಣ ಮಾಡುವುದು,ನಂತರ ಹೆತ್ತವರು,ಶಿಕ್ಷಕರು,ಸಮಾಜ ನಿರ್ಣಯಿಸಬೇಕು.ವಿದ್ಯಾರ್ಥಿಗಳು ಉತ್ತಮರ ಸಹವಾಸ ಮಾಡಬೇಕು.ಶಿಕ್ಷಕರು ಹಕ್ಕು ಮತ್ತು ಕರ್ತವ್ಯದಿಂದ ವಿದ್ಯಾರ್ಥಿಗಳಲ್ಲಿರುವ ಸುಪ್ತವಾಗಿರುವ ಕೌಶಲಗಳನ್ನು ಬೆಳೆಸಬೇಕು.ಋಣಾತ್ಮಕ ಆಲೋಚನೆಯನ್ನು ಬದಿಗೊತ್ತಿ ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು ಎಂದರು.
ಕಾಲೇಜಿನ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿ,ವಿದ್ಯಾರ್ಥಿಗಳು ಪರಿಶ್ರಮದಿಂದ ಮಾತ್ರ ಯಶಸ್ವಿಯಾಗಲು ಸಾಧ್ಯ.ಸಮಯ,ಶಿಕ್ಷಕರಿಗೆ,ಹೆತ್ತವರಿಗೆ ಗೌರವ ಕೊಡಬೇಕು ಎಂದರು.ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಚಾರ್ಯೆ ರಾಜಲಕ್ಷ್ಮೀ ಎಸ್ ರೈ ಅವರು,ಕಾಲೇಜಿನ ನಿಯಮಗಳನ್ನು ಸವಿವಿರವಾಗಿ ತಿಳಿಸಿದರು.ಕಾಲೇಜಿನ ಉಪಪ್ರಾಚಾರ್ಯ ಶೇಷಗಿರಿ ಎಂ ಅವರು ಸ್ವಾಗತಿಸಿದರು,ವಿದ್ಯಾರ್ಥಿ ರಿತೇಶ್ ಪ್ರಾರ್ಥಿಸಿದರು.ನಿತೇಶ್ ವಂದಿಸಿದರು.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…