ಸುದ್ದಿಗಳು

ಸವಣೂರು : ಶ್ರೀನಿವಾಸ ಕಲ್ಯಾಣ ಪೂರ್ವಭಾವಿ ಸಭೆ,ಸಮಿತಿ ರಚನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸವಣೂರು : ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ರಜತ ಸಂಭ್ರಮದ ಸಮಾರೋಪ ಸಮಾರಂಭದ ಅಂಗವಾಗಿ ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದ್ದು,ಇದರ ಅಂಗವಾಗಿ ತಿರುಪತಿ ವೆಂಕಟರಮಣ ದೇವರ ಸನ್ನಿಧಿಯಿಂದಲೇ ದೇವರನ್ನು ಹಾಗೂ ಭಕ್ತ ತಂಡವನ್ನು ಬರಮಾಡಿಕೊಂಡು ನಡೆಸಲಾಗುವ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದ ಪೂರ್ವ ತಯಾರಿಗಾಗಿ ಸವಣೂರು ವಲಯದ ಸಮಿತಿ ರಚನೆ ಹಾಗೂ ಪೂರ್ವ ಸಿದ್ದತಾ ಸಭೆಯು ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಶುಕ್ರವಾರ ನಡೆಯಿತು.

Advertisement

ಸಭೆಯಲ್ಲಿ ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ.ಸುರೇಶ್ ಕುಮಾರ್ ಕೂಡೂರು ಮಾತನಾಡಿ, ಶ್ರೀ ಭಾರತಿ ಶಾಲೆಯ 25 ನೇ ವರ್ಷಾಚರಣೆಯ ಅಂಗವಾಗಿ ಸುಮಾರು 2.5 ಕೋಟಿ ವೆಚ್ಚದಲ್ಲಿ ಸಮಿತಿಯ ಅಧ್ಯಕ್ಷ ಕೃಷ್ಣ ಕುಮಾರ್ ಅತ್ರಿಜಾಲು ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳು ಪ್ರಗತಿಯಲ್ಲಿದ್ದು, ರಜತ ಸಮಾರಂಭದ ಸಮಾರೋಪಕ್ಕೆ ಕೇಂದ್ರ ಸರಕಾರದ ಸಚಿವರು,ಧಾರ್ಮಿಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.ಇದರ ಒಂದು ಭಾಗವಾಗಿ ವಿಶೇಷವಾದ ಶ್ರೀನಿವಾಸ ಕಲ್ಯಾಣ ಆಯೋಜನೆ ಕುರಿತು 9 ಗ್ರಾಮಗಳಲ್ಲಿ ಸಮಿತಿ ರಚಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದರು.

ಶಾಲೆಯ ವತಿಯಿಂದ ಗ್ರಾಮದ ಜವಾಬ್ದಾರಿ ಗಂಗಾಧರ ಗೌಡ ಅವರು ಪ್ರಸ್ತಾವನೆಗೈದರು.ಕಾರ್ಯಕ್ರಮದಲ್ಲಿ ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕ ಈಶ್ವರ ಗೌಡ ಪಜ್ಜಡ್ಕ,ರಜತ ಸಂಭ್ರಮ ಸಮಿತಿ ಸದಸ್ಯರಾದ ಸುಂದರ ಗೌಡ,ಶ್ರೀಧರ ಬಲ್ಯಾಯ,ಈಶ್ವರ ಭಟ್,ಸುರೇಶ್ ಕುಂಡಡ್ಕ ಉಪಸ್ಥಿತರಿದ್ದರು.

ಸವಣೂರು ವಲಯ ಸಮಿತಿ ರಚನೆ : ಸಭೆಯಲ್ಲಿ ಸವಣೂರು ವಲಯದ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮದ ಸವಣೂರು ವಲಯ ಸಮಿತಿ ರಚಿಸಲಾಯಿತು.ಸಂಚಾಲಕರಾಗಿ ,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗಣೇಶ್ ಕೆಡೆಂಜಿ,ಕಾರ್ಯದರ್ಶಿಯಾಗಿ ತೀರ್ಥರಾಮ ಕೆಡೆಂಜಿ, ಸಹ ಸಂಚಾಲಕರಾಗಿ ಸವಣೂರು ಗ್ರಾ.ಪಂ.ಸದಸ್ಯರಾದ ಗಿರಿಶಂಕರ ಸುಲಾಯ,ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ಗಂಗಾಧರ ಪೆರಿಯಡ್ಕ,ಯುವಕ ಮಂಡಲದ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ,ಸದಸ್ಯರಾಗಿ ಸವಣೂರು ಪ್ರಾ.ಕೃ.ಸ.ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಸುಪ್ರಿತ್ ರೈ ಖಂಡಿಗ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ತಾ.ಪಂ.ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ,ಗ್ರಾ.ಪಂ.ಸದಸ್ಯರಾದ ಪ್ರಕಾಶ್ ಕುದ್ಮನಮಜಲು,ರಾಜೀವಿ ಶೆಟ್ಟಿ,ಬಾಲಕೃಷ್ಣ ನಾಯ್ಕ ಕೆಡೆಂಜಿ,ಜಗದೀಶ ಆರೇಲ್ತಡಿ,ಗಣೇಶ್ ಮಡಿವಾಳ ಮಡಕೆ,ಜಯಂತ ಕುಲಾಲ್‌ವಿಶ್ವನಾಥ ಡೆಬ್ಬೆಲಿ ಅವರನ್ನು ಆಯ್ಕೆ ಮಾಡಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

2 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

3 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

3 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

3 hours ago

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

1 day ago