ಸವಣೂರು : ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಫೆ.7 ಮತ್ತು 8ರಂದು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಫೆ.7ರಂದು ಬೆಳಿಗ್ಗೆ ತಂತ್ರಿಗಳ ಆಗಮನ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಮದ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪರಿವಾರ ದೇವರುಗಳ ಪ್ರತಿಷ್ಠಾ ದಿನದ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಪಲ್ಲಪೂಜೆ ನಡೆಯಿತು. ಮದ್ಯಾಹ್ನ ಗೋಪಾಲಕೃಷ್ಣ ಬಡೆಕಿಲ್ಲಾಯ ಅವರ ಮನೆಯವರ ಸೇವಾರ್ಥವಾಗಿ ಅನ್ನಸಂತರ್ಪಣೆ ನಡೆಯಿತು. ಸಂಜೆ ದೀಪಾರಾಧನೆ, ತಾಯಂಬಕ ಸೇವೆ, ಮಹಾಪೂಜೆ, ಶ್ರೀ ದೇವರ ಬಲಿಹೊರಟು ಉತ್ಸವ, ಶ್ರೀ ಭೂತಬಲಿ, ವಸಂತ ಕಟ್ಟೆಪೂಜೆ, ಸುಡುಮದ್ದು ಪ್ರದರ್ಶನ ನಡೆಯಿತು.
ಫೆ.8ರಂದು ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ವೈದಿಕ ಮಂತ್ರಾಕ್ಷತೆ ನಡೆಯಿತು. ಮದ್ಯಾಹ್ನ ಸವಣೂರು ಕೆ.ಸೀತಾರಾಮ ರೈ ಅವರ ಪುತ್ರ ಡಾ.ರಾಜೇಶ್ ರೈ ಸವಣೂರು ಅವರ ಸೇವಾರ್ಥ ಅನ್ನಸಂತರ್ಪಣೆ ನಡೆಯಿತು. ರಾತ್ರಿ ರಂಗಪೂಜೆ, ಉಳ್ಳಾಲ್ತಿ ದೈವಕ್ಕೆ ನೇಮೋತ್ಸವ ನಡೆಯಿತು. ಸವಣೂರು ಗುತ್ತು ಕುಟುಂಬಸ್ಥರ ಸೇವಾರ್ಥ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭ ಆಡಳಿತ ಸಮಿತಿ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಆಡಳಿತದಾರ ಸವಣೂರುಗುತ್ತು ರತ್ನಾಕರ ಶೆಟ್ಟಿ, ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಉತ್ಸವ ಸಮಿತಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ಕಾರ್ಯದರ್ಶಿ ದಯಾನಂದ ಮಾಲೆತ್ತಾರು, ಪ್ರಧಾನ ಆರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ, ಸೇವಾ ಸಮಿತಿ ಅಧ್ಯಕ್ಷ ಉಮಾಪ್ರಸಾದ್ ರೈ ನಡುಬೈಲು , ಕಾರ್ಯದರ್ಶಿ ರಾಘವ ಗೌಡ ಸವಣೂರು, ಸೇವಾ ಸಮಿತಿ ಉಪಾಧ್ಯಕ್ಷ ಬೆಳಿಯಪ್ಪ ಗೌಡ ಚೌಕಿಮಠ, ಗಂಗಾಧರ ಸುಣ್ಣಾಜೆ, ಗ್ರಾಮದ ದೈವ ಶಿರಾಡಿ ದೈವದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಜ್ವಲ ಕೆ.ಆರ್, ಕಾರ್ಯದರ್ಶಿ ಗಣೇಶ್ ಪಟ್ಟೆ ಮೊದಲಾದವರಿದ್ದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…