ಸವಣೂರು: ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರತಿಭಾ ದಿನಾಚರಣೆ ಮತ್ತು ದತ್ತಿನಿಧಿ ವಿತರಣಾ ಸಮಾರಂಭ ಹಾಗೂ ನೂತನ ಕಟ್ಟಡ ಮತ್ತು ಆವರಣ ಗೋಡೆಯ ಉದ್ಘಾಟನಾ ಸಮಾರಂಭ ನಡೆಯಿತು.
ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾದ ದಿನೇಶ್ ಮೆದು ಆವರಣ ಗೋಡೆಯನ್ನು ಉದ್ಘಾಟಿಸಿದರು. ಪುತ್ತೂರು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಲಲಿತಾ ಈಶ್ವರ ನೂತನ ಕೊಠಡಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಬೆಳಂದೂರು ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯೆ ಪ್ರಮೀಳಾ ಜನಾರ್ದನ್ ನೂತನ ಕೊಠಡಿಯಲ್ಲಿ ದೀಪ ಬೆಳಗಿಸಿ ಶುಭ ಹಾರೈಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ ಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಗಿರಿಶಂಕರ ಸುಲಾಯ ವಹಿಸಿದ್ದರು. ವೇದಿಕೆಯಲ್ಲಿ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಸವಣೂರು ಸಿ.ಎ ಬ್ಯಾಂಕ್ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಬಲ್ಯಾಯ, ರಾಜೀವಿ ವಿ ಶೆಟ್ಟಿ, ಗಾಯತ್ರಿ ಬರೆಮೇಲು, ಪ್ರಕಾಶ್ ಕುದ್ಮನಮಜಲು, ಕಟ್ಟಡದ ಗುತ್ತಿಗೆದಾರ ಶೇಖ್ ಹಸನ್ ಸಾಹೇಬ್, ಕಾಲೇಜು ವಿಭಾಗದ ವಿದ್ಯಾರ್ಥಿ ನಾಯಕಿ ದಿವ್ಯಾ, ಉಪನಾಯಕಿ ಲೇಖನ್ ಕೃಷ್ಣ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ನಾಯಕ ಮುಹಮ್ಮದ್ ಮುಬಶ್ಶಿರ್, ಉಪನಾಯಕಿ ಫಾತಿಮತ್ ಝೌರಾ, ಕಟ್ಟಡ ಸಮಿತಿಯ ಅಧ್ಯಕ್ಷ ಕೃಷ್ಣಕುಮಾರ್ ರೈ ಪಿ ಡಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳ ಪೋಷಕರು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಈ ಸಾಲಿನ ವಿವಿಧ ದತ್ತಿನಿಧಿಗಳನ್ನು ಹಾಗೂ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. 2019-20ನೇ ಸಾಲಿನ ಶೈಕ್ಷಣಿಕ ವರದಿಯನ್ನು ಸಂಸ್ಥೆಯ ಪ್ರಾಂಶುಪಾಲೆ ಪದ್ಮಾವತಿ ಹಾಗೂ ಮುಖ್ಯಶಿಕ್ಷಕ ರಘು ಬಿ ಆರ್ ವಾಚಿಸಿದರು. ಉಪನ್ಯಾಸಕ ಬಿ ವಿ ಸೂರ್ಯನಾರಾಯಣ ರಾವ್ ಸ್ವಾಗತಿಸಿ, ಸಹಶಿಕ್ಷಕಿ ರೀನಾ ಎಂ ಡಿ ವಂದಿಸಿದರು. ಉಪನ್ಯಾಸಕಿ ಶೋಭಾ ಏನೆಕಲ್ ಮತ್ತು ಸಹಶಿಕ್ಷಕ ಕಿಶನ್ ಬಿ ವಿ ಕಾರ್ಯಕ್ರಮ ನಿರೂಪಿಸಿದರು.