ಮಂಗಳೂರು : 2020-21ನೇ ಸಾಲಿನಲ್ಲಿ ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ ಕ್ಷತ್ರಿಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಮತ್ತು ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಮೇಲ್ಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ಅರ್ಜಿ ನಮೂನೆಯನ್ನು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋ ಮತ್ತು ಇತರೆ ದಾಖಲಾತಿಗಳನ್ನು ನಿಗಮದ ವೆಬ್‍ಸೈಟ್ ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಕಚೇರಿಗೆ ಆಗಸ್ಟ್ 3 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಚೇರಿಯನ್ನು ಅಥವಾ ನಿಗಮದ ಮೇಲ್ಕಂಡ ವೆಬ್‍ಸೈಟ್‍ನಲ್ಲಿ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…