ಎಸ್. ಎನ್. ಮನ್ಮಥ
ಸುಳ್ಯ: ಸುಳ್ಯ ತಾಲೂಕಿನಲ್ಲಿ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯ ಅಭ್ಯರ್ಥಿಗಳು ದೊಡ್ಡ ತಲೆ ನೋವು ಸೃಷ್ಟಿಸಿದೆ. ಅರಂತೋಡು ಸಹಕಾರಿ ಸಂಘದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮತ್ತು ಐವರ್ನಾಡು ಸಹಕಾರಿ ಸಂಘದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹಾಗು ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ಪಕ್ಷದ ಸೂಚನೆಯನ್ನು ಮೀರಿ ಸ್ಪರ್ಧೆಗೆ ಇಳಿದಿರುವುದು ಪಕ್ಷಕ್ಕೆ ತಲೆ ನೋವು ಸೃಷ್ಟಿಸಿದೆ. ಈ ಹಿನ್ನಲೆಯಲ್ಲಿ ಇವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನು ಪಕ್ಷ ನೀಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ.
ಸುಳ್ಯ ಕ್ಷೇತ್ರದಲ್ಲಿ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿಯ ಸೂಕ್ತ ಅಭ್ಯರ್ಥಿಗಳನ್ನು ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಎಸ್ ಎನ್ ಮನ್ಮಥ ಹಾಗೂ ಅರಂತೋಡು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಸಂತೋಷ್ ಕುತ್ತಮೊಟ್ಟೆಯವರು ಭಾರತೀಯ ಜನತಾ ಪಾರ್ಟಿ ಮತ್ತು ಸಹಕಾರ ಭಾರತಿಯ ಸೂಚನೆಗಳನ್ನು ಧಿಕ್ಕರಿಸಿರುತ್ತಾರೆ. ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ. ಹಾಗಾಗಿ ಅವರ ಮೇಲೆ ಸೂಕ್ತ ಶಿಸ್ತುಕ್ರಮ ಕೈಗೊಳ್ಳಲಾಗುವುದು. ‘ಅವರು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾಗಿರುವುದಿಲ್ಲ’ ಎಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡ್ಡಮತದಾನದ ಇಫೆಕ್ಟ್: ದ.ಕ.ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಇಫೆಕ್ಟ್ ಸಹಕಾರ ಸಂಘಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಸಹಕಾರ ಭಾರತಿಯನ್ನು ಕಂಗೆಡಿಸಿದೆ. ಅಡ್ಡಮತದಾನ ಮಾಡಿದ ಏಳು ಮಂದಿಯನ್ನು ನಿಖರವಾಗಿ ಪತ್ತೆ ಹಚ್ಚಲು ಕಾರಣವಾಗದ ಕಾರಣ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಪ್ರತಿನಿಧಿಗಳಾಗಿದ್ದ ಎಲ್ಲಾ 17 ಮಂದಿಯೂ ರಾಜಿನಾಮೆ ನೀಡಬೇಕೆಂದು ಸೂಚನೆ ನೀಡಲಾಗಿತ್ತು. ಪಕ್ಷ ನಿಗದಿಪಡಿಸಿದ ಸಮಯದೊಳಗೆ ರಾಜಿನಾಮೆ ನೀಡಿಲ್ಲ ಮತ್ತು ಪಕ್ಷದ ಸೂಚನೆಯನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಸಂತೋಷ್ ಕುತ್ತಮೊಟ್ಟೆ ಮತ್ತು ಎಸ್.ಎನ್.ಮನ್ಮಥರಿಗೆ ಚುನಾವಣೆಯಲ್ಲಿ ಅಭ್ಯರ್ಥಿಗಳಾಗಲು ಅವಕಾಶ ನೀಡಲಿಲ್ಲ. ಆದರೆ ಮಾತುಕತೆಗಳು ವಿಫಲವಾದ ಹಿನ್ನಲೆಯಲ್ಲಿ ಈ ಇಬ್ಬರು ಪಕ್ಚದ ಅಭ್ಯರ್ಥಿಗಳು ಅಲ್ಲ ಘೋಷಿಸಿ ಮತ್ತು ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…