Advertisement
Political mirror

ಸಹಕಾರ ಸಂಘದ ಚುನಾವಣೆ- ಬಂಡಾಯ ಅಭ್ಯರ್ಥಿಗಳಿಗೆ ಬಿಜೆಪಿ ಎಚ್ಚರಿಕೆ

Share

ಸುಳ್ಯ: ಸುಳ್ಯ ತಾಲೂಕಿನಲ್ಲಿ ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯ ಅಭ್ಯರ್ಥಿಗಳು ದೊಡ್ಡ ತಲೆ ನೋವು ಸೃಷ್ಟಿಸಿದೆ. ಅರಂತೋಡು ಸಹಕಾರಿ ಸಂಘದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮತ್ತು ಐವರ್ನಾಡು ಸಹಕಾರಿ ಸಂಘದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹಾಗು ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ಪಕ್ಷದ ಸೂಚನೆಯನ್ನು ಮೀರಿ ಸ್ಪರ್ಧೆಗೆ ಇಳಿದಿರುವುದು ಪಕ್ಷಕ್ಕೆ ತಲೆ ನೋವು ಸೃಷ್ಟಿಸಿದೆ. ಈ ಹಿನ್ನಲೆಯಲ್ಲಿ ಇವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನು ಪಕ್ಷ ನೀಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ.

ಸುಳ್ಯ ಕ್ಷೇತ್ರದಲ್ಲಿ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿಯ ಸೂಕ್ತ ಅಭ್ಯರ್ಥಿಗಳನ್ನು ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಎಸ್ ಎನ್ ಮನ್ಮಥ ಹಾಗೂ ಅರಂತೋಡು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಸಂತೋಷ್ ಕುತ್ತಮೊಟ್ಟೆಯವರು ಭಾರತೀಯ ಜನತಾ ಪಾರ್ಟಿ ಮತ್ತು ಸಹಕಾರ ಭಾರತಿಯ ಸೂಚನೆಗಳನ್ನು ಧಿಕ್ಕರಿಸಿರುತ್ತಾರೆ. ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ. ಹಾಗಾಗಿ ಅವರ ಮೇಲೆ ಸೂಕ್ತ ಶಿಸ್ತುಕ್ರಮ ಕೈಗೊಳ್ಳಲಾಗುವುದು. ‘ಅವರು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾಗಿರುವುದಿಲ್ಲ’ ಎಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಡ್ಡಮತದಾನದ ಇಫೆಕ್ಟ್: ದ.ಕ.ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಇಫೆಕ್ಟ್ ಸಹಕಾರ ಸಂಘಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಸಹಕಾರ ಭಾರತಿಯನ್ನು ಕಂಗೆಡಿಸಿದೆ. ಅಡ್ಡಮತದಾನ ಮಾಡಿದ ಏಳು ಮಂದಿಯನ್ನು ನಿಖರವಾಗಿ ಪತ್ತೆ ಹಚ್ಚಲು ಕಾರಣವಾಗದ ಕಾರಣ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಪ್ರತಿನಿಧಿಗಳಾಗಿದ್ದ ಎಲ್ಲಾ 17 ಮಂದಿಯೂ ರಾಜಿನಾಮೆ ನೀಡಬೇಕೆಂದು ಸೂಚನೆ ನೀಡಲಾಗಿತ್ತು. ಪಕ್ಷ ನಿಗದಿಪಡಿಸಿದ ಸಮಯದೊಳಗೆ ರಾಜಿನಾಮೆ ನೀಡಿಲ್ಲ ಮತ್ತು ಪಕ್ಷದ ಸೂಚನೆಯನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಸಂತೋಷ್ ಕುತ್ತಮೊಟ್ಟೆ ಮತ್ತು ಎಸ್.ಎನ್.ಮನ್ಮಥರಿಗೆ ಚುನಾವಣೆಯಲ್ಲಿ ಅಭ್ಯರ್ಥಿಗಳಾಗಲು ಅವಕಾಶ ನೀಡಲಿಲ್ಲ. ಆದರೆ ಮಾತುಕತೆಗಳು ವಿಫಲವಾದ ಹಿನ್ನಲೆಯಲ್ಲಿ ಈ ಇಬ್ಬರು ಪಕ್ಚದ ಅಭ್ಯರ್ಥಿಗಳು ಅಲ್ಲ ಘೋಷಿಸಿ ಮತ್ತು ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

31 minutes ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

38 minutes ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

43 minutes ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

47 minutes ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

18 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 day ago