ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ದಾನಿಗಳ ನೆರವಿನಿಂದ ಮತ್ತು ಯುವ ಸಂಘಟನೆಗಳ ಕಾರ್ಯಕರ್ತರ ಶ್ರಮದಾನದಿಂದ ಅಜ್ಜಾವರದಲ್ಲಿ ನಿರ್ಮಾಣಗೊಂಡ ನೂತನ ಮನೆ ‘ಬೆಳಕು‘ ಹಸ್ತಾಂತರ ಕಾರ್ಯಕ್ರಮ ಶುಕ್ರವಾರ ನಡೆಯಿತು. ಗ್ರಾಮದ ಅಡ್ಪಾಂಗಾಯ ಮಾವಿನಪಳ್ಳದಲ್ಲಿ ನಿರ್ಮಾಣಗೊಂಡ ಮನೆಯನ್ನು ರಾಮಣ್ಣ ನಾಯ್ಕ ದಂಪತಿಗಳಿಗೆ ಹಸ್ತಾಂತರಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ ಮತ್ತು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್.ರೈ ದೀಪ ಬೆಳಗಿಸಿದ ಬಳಿಕ ಮನೆಯ ‘ಬೆಳಕು‘ ನಾಮಫಲಕವನ್ನು ಅನಾವರಣಗೊಳಿಸಿದರು. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಉದ್ಘಾಟಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಮಾಜಿ ಸದಸ್ಯ ನವೀನ್ ಕುಮಾರ್ ಮೇನಾಲ, ಸುಳ್ಯ ನ.ಪಂ.ಸದಸ್ಯೆ ಶಿಲ್ಪಾ ಸುದೇವ್, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಹರ್ಷಿತಾ ಪುರುಷೋತ್ತಮ, ಪಿ.ಬಿ.ಸುಧಾಕರ ರೈ, ಕೆ.ಎಸ್.ಗೋಪಾಲಕೃಷ್ಣ ಕರೋಡಿ, ಹಸೈನಾರ್ ಹಾಜಿ ಗೋರಡ್ಕ, ಶ್ಯಾಂ ಅಡ್ಡಂತ್ತಡ್ಕ, ಲೋಕೇಶ್ ಗುಡ್ಡೆಮನೆ, ವಿನೋದ್ ಲಸ್ರಾದೋ ಮತ್ತಿತರರು ಉಪಸ್ಥಿತರಿದ್ದರು. ಮನೆ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿದ ಸಂಘಟನೆಗಳ ಕಾರ್ಯಕರ್ತರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ದಾನಿಗಳ ಸಹಕಾರದಲ್ಲಿ ಅಜ್ಜಾವರದಲ್ಲಿ ಮತ್ತೊಂದು ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಕುಂಞಿ ಅಹಮ್ಮದ್ ತಿಳಿಸಿದ್ದಾರೆ. ವಿಖ್ಯಾತ್ ಬಾರ್ಪಣೆ ಕಾರ್ಯಕ್ರಮ ನಿರೂಪಿಸಿದರು.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…