ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ದಾನಿಗಳ ನೆರವಿನಿಂದ ಮತ್ತು ಯುವ ಸಂಘಟನೆಗಳ ಕಾರ್ಯಕರ್ತರ ಶ್ರಮದಾನದಿಂದ ಅಜ್ಜಾವರದಲ್ಲಿ ನಿರ್ಮಾಣಗೊಂಡ ನೂತನ ಮನೆ ‘ಬೆಳಕು‘ ಹಸ್ತಾಂತರ ಕಾರ್ಯಕ್ರಮ ಶುಕ್ರವಾರ ನಡೆಯಿತು. ಗ್ರಾಮದ ಅಡ್ಪಾಂಗಾಯ ಮಾವಿನಪಳ್ಳದಲ್ಲಿ ನಿರ್ಮಾಣಗೊಂಡ ಮನೆಯನ್ನು ರಾಮಣ್ಣ ನಾಯ್ಕ ದಂಪತಿಗಳಿಗೆ ಹಸ್ತಾಂತರಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ ಮತ್ತು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್.ರೈ ದೀಪ ಬೆಳಗಿಸಿದ ಬಳಿಕ ಮನೆಯ ‘ಬೆಳಕು‘ ನಾಮಫಲಕವನ್ನು ಅನಾವರಣಗೊಳಿಸಿದರು. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಉದ್ಘಾಟಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಮಾಜಿ ಸದಸ್ಯ ನವೀನ್ ಕುಮಾರ್ ಮೇನಾಲ, ಸುಳ್ಯ ನ.ಪಂ.ಸದಸ್ಯೆ ಶಿಲ್ಪಾ ಸುದೇವ್, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಹರ್ಷಿತಾ ಪುರುಷೋತ್ತಮ, ಪಿ.ಬಿ.ಸುಧಾಕರ ರೈ, ಕೆ.ಎಸ್.ಗೋಪಾಲಕೃಷ್ಣ ಕರೋಡಿ, ಹಸೈನಾರ್ ಹಾಜಿ ಗೋರಡ್ಕ, ಶ್ಯಾಂ ಅಡ್ಡಂತ್ತಡ್ಕ, ಲೋಕೇಶ್ ಗುಡ್ಡೆಮನೆ, ವಿನೋದ್ ಲಸ್ರಾದೋ ಮತ್ತಿತರರು ಉಪಸ್ಥಿತರಿದ್ದರು. ಮನೆ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿದ ಸಂಘಟನೆಗಳ ಕಾರ್ಯಕರ್ತರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ದಾನಿಗಳ ಸಹಕಾರದಲ್ಲಿ ಅಜ್ಜಾವರದಲ್ಲಿ ಮತ್ತೊಂದು ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಕುಂಞಿ ಅಹಮ್ಮದ್ ತಿಳಿಸಿದ್ದಾರೆ. ವಿಖ್ಯಾತ್ ಬಾರ್ಪಣೆ ಕಾರ್ಯಕ್ರಮ ನಿರೂಪಿಸಿದರು.
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…