ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ

July 11, 2019
11:00 AM

ಸುಳ್ಯ:ಕಾನೂನು ಕ್ಷೇತ್ರ ವಿಶಾಲವಾದುದು. ಪ್ರಪಂಚದ ಮೂಲೆ ಮೂಲೆಗಳಲ್ಲಿ ಒಳ್ಳೆಯ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಕಾನೂನು ಶಿಕ್ಷಣ ಬಹು ಮುಖ್ಯ ಹಾಗೂ ಅತ್ಯಂತ ಗೌರವದ ಸ್ಥಾನವನ್ನು ಸಮಾಜದಲ್ಲಿ ಗಳಿಸಲು ಈ ಹುದ್ದೆ ನೆರವಾಗುವುದು ಎಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಕೌಶಿಕ್ ಸಿ ಅವರು ಹೇಳಿದರು.

Advertisement
Advertisement
Advertisement

ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಕಾನೂನು ಶಿಕ್ಷಣಾವಕಾಶಗಳ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಆಧುನಿಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯುವಲ್ಲಿ ಕಾನೂನು ಶಿಕ್ಷಣ ಮುಖ್ಯ ಪಾತ್ರ ವಹಿಸುವುದು ಎಂದು ಹೇಳಿದರು. ಕಾನೂನು ಪದವಿಯನ್ನು ಪಡೆಯುವುದರ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಗಳಾಗಿ, ಸಮಾಜ ಸೇವೆಯಲ್ಲೂ ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು. ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಹೇಳಿದರು. ಅಪರಾಧಿ ಕೃತ್ಯಗಳಿಂದ ದೂರವಿದ್ದು ಉತ್ತಮ ವ್ಯಕ್ತಿಗಳಾಗಿ ಬಾಳಿ ಎಂದು ಕಿವಿಮಾತು ಹೇಳಿದರು.

Advertisement

ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ  ಹರಿಣಿ ಪುತ್ತೂರಾಯ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕರಾದ ಶ್ರೀ ಲಕ್ಷ್ಮಣ್ ಏನೆಕಲ್  ಉಪಸ್ಥಿತರಿದ್ದರು.

ಸಂಖ್ಯಾ ಶಾಸ್ತ್ರ ಉಪನ್ಯಾಸಕಿ  ಹರ್ಷಿತ ಅವರು ಸ್ವಾಗತಿಸಿ , ಅರ್ಥಶಾಸ್ತ್ರ ಉಪನ್ಯಾಸಕ ವಿನಯ ವಂದಿಸಿದರು. ಕನ್ನಡ ಉಪನ್ಯಾಸಕಿ  ಬೇಬಿ ವಿದ್ಯಾ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror