ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್‌ನಿಂದ ಹೆಲ್ತ್ ಮೀಡಿಯಾ ಕ್ಲಿನಿಕ್ ಯೋಜನೆಯಡಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರ ಉಚಿತ ಅರೋಗ್ಯ ತಪಾಸಣೆ ಹಲವು ತಿಂಗಳಿನಿಂದ ನಡೆಯುತ್ತಿದ್ದು, ಇದನ್ನು ಸಾರ್ವಜನಿಕರಿಗೂ ಮುಂದುವರಿಸಲು ನಿರ್ಧರಿಸಲಾಗಿದೆ.
ನ.19ರಂದು ಉದ್ಘಾಟನೆ: ಉಚಿತ ಆರೋಗ್ಯ ಶಿಬಿರವನ್ನು ನ.19ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಲಕ್ಷ್ಮೀ ಮೆಮೊರಿಯಲ್ ಎಜುಕೇಶನ್ ಟ್ರಸ್ಟ್‌ನ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ. ಅಶೋಕ್ ಹೆಗ್ಡೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ವಹಿಸಲಿದ್ದಾರೆ. ಮೀಡಿಯಾ ಹೆಲ್ತ್ ಕ್ಲಿನಿಕ್‌ನಲ್ಲಿ ಇಂದಿನಿಂದ ಪ್ರತಿ ತಿಂಗಳ ಎರಡನೇ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಇದರ ಪ್ರಯೋಜವನ್ನು ಸಾರ್ವಜನಿಕರು ಪಡೆದುಕೊಳ್ಳಬಹುದು. ಈಗಾಗಲೇ 200 ಕ್ಕೂ ಹೆಚ್ಚು ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರು ಅರೋಗ್ಯ ತಪಾಸಣೆ ಮಾಡಿರುತ್ತಾರೆ.
ತಪಾಸಣೆ ವಿವರ: ರಕ್ತ ತಪಾಸಣೆ, ಬಿಪಿ, ಇಸಿಜಿ ಪರೀಕ್ಷೆ, ಡಯಾಬಿಟೀಸ್ ಸೇರಿದಂತೆ ಅರೋಗ್ಯದಲ್ಲಿ ಸಮಸ್ಯೆಗಳಿದ್ದಲ್ಲಿ ವೈದ್ಯರೊಂದಿಗೆ ಸಮಾಲೋಚನೆ ಮಾಡಬಹುದಾಗಿದೆ. ಮಹಿಳೆಯರಿಗೆ ತಜ್ಞ ವೈದ್ಯೆಯರಿಂದ ತಪಾಸಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಪತ್ರಕರ್ತರು ಹಾಗೂ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದೆಂದು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದ್ದಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…