Advertisement
ಸುದ್ದಿಗಳು

ಸಾರ್ವಜನಿಕರಿಗೆ ತೊಂದರೆಯಾಗದೇ ಮರಳು ಪೂರೈಕೆಯಾಗಲಿ- ಸಚಿವರ ಸೂಚನೆ

Share

ಮಂಗಳೂರು: ಸಾರ್ವಜನಿಕರಿಗೆ ಸುಲಭವಾಗುವ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು. ಇದರಿಂದ ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ, ಕಷ್ಟಗಳಾಗಬಾರದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸೋಮವಾರ ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು. ಸರಕಾರದಿಂದ ನೀಡಬೇಕಾದ ಸೌಲಭ್ಯವನ್ನು ಒದಗಿಸಿಕೊಡಲಾಗುವುದು, ಸರಕಾರಿ ಕಾಮಗಾರಿಗಳಿಗೆ ಸಕಾಲದಲ್ಲಿ ಮರಳು ಪೂರೈಕೆಯಾಗಿ ಕಾಮಗಾರಿಗಳನ್ನು ಆದಷ್ಟು ಕನಿಷ್ಟ ಸಮಯದಲ್ಲಿ ಪೂರ್ತಿಗೊಳಿಸುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಸ್ಯಾಂಡ್ ಬಝಾರ್ ಆ್ಯಪ್ ಮೂಲಕ ಮರಳು ಕಾಯ್ದಿರಿಸಿ, 2,3 ದಿನಗಳೊಳಗೆ ಮರಳು ದೊರಕದೇ ಇದ್ದಲ್ಲಿ ಈ ಕುರಿತು ಸಾರ್ವಜನಿಕರು ದೂರು ನೀಡಬಹುದು. ಸಾರ್ವಜನಿಕರಿಗೆ ಸುಲಭ ರೀತಿಯಲ್ಲಿ ಯೋಜನೆಗಳು ಸಕ್ರಿಯವಾಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಜಿಲ್ಲಾ ಖನಿಜ ಪ್ರತಿಷ್ಠಾನ ನಿಧೀಯಲ್ಲಿ ರೂ. 4.62 ಕೋಟಿ ಮೊತ್ತ ಲಭ್ಯವಿದ್ದು, ಇದನ್ನು ಗಣಿಗಾರಿಕೆಯಿಂದ ತೊಂದರೆಗೀಡಾದ ಪ್ರದೇಶಗಳ ಅಭಿವೃದ್ಧಿಗೆ ಬಳಸಲಾಗುವುದು. ಆಯಾ ಪ್ರದೇಶದ ಶಾಸಕರಿಂದ ಕ್ರಿಯಾ ಯೋಜನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಸಚಿವರು ಸೂಚಿಸಿದರು. ಡಿ.ಎಂ.ಎಫ್ ಖಾತೆಯಲ್ಲಿ ಲಭ್ಯವಿರುವ ಮೊತ್ತವನ್ನು ವಿವಿಧ ಕಾಮಗಾರಿ ಕೆಲಸಗಳಿಗೆ ಹಂಚಿಕೆ ಮಾಡಲಾಗಿರುತ್ತದೆ. ಸಮಿತಿ ಸಭೆಯ ತೀರ್ಮಾನದಂತೆ ವಿಧಾನ ಸಭಾ ಕ್ಷೇತ್ರಕ್ಕೆ ಅನುಗುಣವಾಗಿ ಕಾಮಗಾರಿ ಹಾಗೂ ಅನುದಾನದ ಮೊತ್ತವನ್ನು ಹಂಚಿಕೆ ಮಾಡಲಾಗಿದ್ದು, ಸಂಬಂಧಪಟ್ಟ ವಿಧಾನ ಸಭಾ ಶಾಸಕರಿಗೆ ಕಳುಹಿಸಿಕೊಡಲಾಗಿರುತ್ತದೆ. ತಮ್ಮ ಕ್ಷೇತ್ರಗಳಿಗೆ ಅಗತ್ಯವಿರುವ ಕಾಮಗಾರಿಗಳ ಪಟ್ಟಿಯನ್ನು ಸಭೆಯ ಗಮನಕ್ಕೆ ತರಲಾಯಿತು.

ಸಭೆಯಲ್ಲಿ ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಹಾನಗರಪಾಲಿಕೆ ಆಯುಕ್ತ ಅಜಿತ್ ಹೆಗ್ಡೆ, ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

15 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

18 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

21 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago