Advertisement
ಸುದ್ದಿಗಳು

ಸಾಲಮನ್ನಾ ಪಾವತಿ ಮುಗಿಯದ ಗೊಂದಲ : ಕೆಡಿಪಿ ಸಭೆಯಲ್ಲೂ ಚರ್ಚೆ

Share

ಸುಳ್ಯ: ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಿದೆ. ಆದರೆ ಬಂದದ್ದೆಷ್ಟು, ಸಿಕ್ಕಿದ್ದೆಷ್ಟು ? , ಯಾರಿಗೆ ಎಷ್ಟು ಸಿಕ್ಕಿದೆ, ಹೇಗೆ ಸಿಕ್ಕಿದೆ..? ಇದೆಲ್ಲಾ ಪ್ರಶ್ನೆಗಳಿಗೆ ಸೂಕ್ತ ಉತ್ತರವಿಲ್ಲ. ಕೆಡಿಪಿ ಸಭೆಯಲ್ಲೂ ಹಾಗೆಯೇ ಆಯಿತು. ಕೊನೆಗೆ ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕ ಅಂಗಾರ ಸೂಚಿಸಿದರು.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸುಳ್ಯ ತಾಲೂಕು ಪ್ರಗತಿ ಪರಿಶೀಲನಾ ಸಭೆಯು ಶಾಸಕ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ರಾಜ್ಯ ಸರಕಾರದ ಸಾಲಮನ್ನಾ ಒಂದು ಲಕ್ಷ ರೂ ರೈತರಿಗೆ ಸಲ್ಲಿಕೆಯಾಗಿವರುವ ಬಗ್ಗೆ ಮತ್ತೆ ಗೊಂದಲ ಸೃಷ್ಠಿಯಾಗಿದೆ. ವಾಣಿಜ್ಯ ಬ್ಯಾಂಕ್‍ಗಳ ಮೂಲಕ 1083 ಮಂದಿಗೆ ಮತ್ತು ಸಹಕಾರಿ ಸಂಘಗಳ ಮೂಲಕ 14,114 ಮಂದಿಯ ಖಾತೆಗೆ ನೇರವಾಗಿ ಒಂದು ಲಕ್ಷ ರೂ ಪಾವತಿಯಾಗಿದೆ ಎಂದು ಎರಡು ದಿನಗಳ ಹಿಂದೆ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ನೇತೃತ್ವದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದರು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿಯೂ ಐವನ್ ಡಿಸೋಜ ಇದನ್ನೇ ಪತ್ರಕರ್ತರಿಗೆ ಹೇಳಿದ್ದರು.

ಗುರುವಾರ ನಡೆದ ಕೆ.ಡಿ.ಪಿ ಸಭೆಯಲ್ಲಿ ಸಹಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ವೇಳೆಯಲ್ಲಿ ಕೊಟ್ಟ ಮಾಹಿತಿ ಇದಕ್ಕಿಂದ ಭಿನ್ನವಾಗಿತ್ತು. ಕರ್ನಾಟಕ ಸರಕಾರದ ಸಾಲಮನ್ನಾ ಯೋಜನೆಯಡಿ ಒಂದು ಲಕ್ಷ ಸಾಲ ಮನ್ನಾ ಪಡೆಯಲು 14,114 ಫಲಾನುಭವಿಗಳಿದ್ದು 118.12 ಕೋಟಿ ಬೇಡಿಕೆ ಇರುತ್ತದೆ. ಈ ಪೈಕಿ 5,373 ರೈತರಿಗೆ 37.92 ಕೋಟಿ ರೂ  ಬಿಡುಗಡೆ ಆಗಿರುತ್ತದೆ. 8,771 ರೈತರಿಗೆ 80.20 ಕೋಟಿ ಬಿಡುಗಡೆಗೆ ಬಾಕಿ ಇದೆ ಎಂದು ಸಹಕಾರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಇದು ಸಭೆಯಲ್ಲಿ ಚರ್ಚೆಗೆ ಕಾರಣವಾಯಿತು.  ಯಾವ ರೈತರಿಗೆ ಸಾಲ ಮನ್ನಾ ಹಣ ಪಾವತಿಯಾಗಿದೆ ಯಾರದೆಲ್ಲ ಉಳಿದಿದೆ ಎಂಬುದರ ಬಗ್ಗೆ ಗ್ರಾಮವಾರು ಪಟ್ಟಿ ಸಲ್ಲಿಸುವಂತೆ ಶಾಸಕರು ಸೂಚಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

5 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

13 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

14 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

15 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago