ಸುಳ್ಯ: ರಾಜ್ಯ ಸರಕಾರ ಘೋಷಣೆ ಮಾಡಿರುವ ಸಾಲಮನ್ನಾ ಹಣ ಪೂರ್ತಿಯಾಗಿ ರೈತರ ಖಾತೆಗೆ ಜನವರಿ 10ರೊಳಗೆ ಜಮೆ ಆಗದಿದ್ದರೆ ಜನವರಿ ತಿಂಗಳಲ್ಲಿ ಸುಳ್ಯ ತಾಲೂಕಿನಲ್ಲಿ ನಡೆಯುವ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಮತ್ತು ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ವತಿಯಿಂದ ಡಿ.17ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ 19 ಬೇಡಿಕೆಗಳನ್ನು ಮುಂದಿಡಲಾಗಿತ್ತು. ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಿ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದರು. ಇದಕ್ಕೆ ಸಂಬಂಧಿಸಿದ ಸಭೆಯನ್ನು ಕೂಡಲೇ ಕರೆದು ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ನಿಡಿಂಜಿ, ತೀರ್ಥರಾಮ ಉಳುವಾರು ಉಪಸ್ಥಿತರಿದ್ದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…