ಸುಳ್ಯ :ಈ ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಘೋಷಿಸಿದ ಸಾಲ ಮನ್ನಾ ಯೋಜನೆ ಅನುಷ್ಠಾನದಲ್ಲಿ ಈಗಿನ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸುಳ್ಯ ಕಾಂಗ್ರೆಸ್ ಆರೋಪಿಸಿದೆ. ಒಂದೆಡೆ ಅಧಿಕಾರಿಗಳು ಸಾಲ ಮನ್ನಾ ಯೋಜನೆಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿಕೆ ನೀಡುತ್ತಿದ್ದರೆ ಇನ್ನೊಂದಡೆ ಜಿಲ್ಲೆಯಲ್ಲಿ ಶೇಕಡಾ 75 ರಷ್ಟು ರೈತರಿಗೂ ಇದು ತಲುಪಿಲ್ಲ. ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಮೌನ ವಹಿಸಿರುವುದು ದುರದೃಷ್ಟಕರ. ಶೀಘ್ರದಲ್ಲೇ ರೈತರ ಖಾತೆಗಳಿಗೆ ಹಣ ಜಮೆ ಮಾಡಬೇಕು. ಇಲ್ಲದೇ ಹೋದಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಜಾರಾಮ್ ಭಟ್ ಬೆಟ್ಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯೂ ಜನರನ್ನು ತಲುಪುತಿಲ್ಲ.2018ರಲ್ಲಿ ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯಡಿ ಪ್ರೀಮಿಯಂ ಪಾವತಿಸಿದ ರೈತರಿಗೆ, ವಿಪರೀತ ಮಳೆಯಿಂದಾಗಿ ಫಸಲು ನಷ್ಟ ವಾಗಿದ್ದರೂ ಈ ತನಕ ವಿಮಾ ಪರಿಹಾರ ದೊರೆತಿಲ್ಲ ಎಂದು ಅವರು ಹೇಳಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.