Advertisement
ಕಾರ್ಯಕ್ರಮಗಳು

ಸಾಹಿತ್ಯ ಸಂಭ್ರಮ ಸಮಾರೋಪದಲ್ಲಿ ಗಾಯಕ ಶಶಿಧರ್ ಕೋಟೆ- ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆ ಮರೆಯಬಾರದು

Share

ಬೆಳ್ಳಾರೆ: ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆಯನ್ನು ಎಂದಿಗೂ ಮರೆಯಕೂಡದು. ಹಿರಿಯರ ಪರಂಪರೆಗೆ ವಿದ್ಯಾರ್ಥಿಗಳೇ ಉತ್ತರಾಧಿಕಾರಿಗಳಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿಯೂ ವಿದ್ಯಾರ್ಥಿಗಳದ್ದಾಗಿದೆ ಎಂದು ಖ್ಯಾತ ಗಾಯಕ ಶಶಿಧರ್ ಕೋಟೆ ಹೇಳಿದರು.

ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ನಡೆದ 5ನೇ ವರ್ಷದ ಕನ್ನಡ ರಾಜ್ಯೋತ್ಸವದ ಸಾಹಿತ್ಯ ಸಂಭ್ರಮ 2019 ಇದರ ಸಮಾರೋಪ ಹಾಗು ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಎಲ್ಲಾ ಭಾಷೆಗಳನ್ನು ಪ್ರೀತಿಸಿಕೊಂಡು ನಮ್ಮ ಸಂಸ್ಕೃತಿಯ ಪರಿಧಿಯಲ್ಲಿಯೇ ಒಳ್ಳೆಯದಕ್ಕೆ ಬದಲಾವಣೆಗಳನ್ನು ಮಾಡಿಕೊಂಡು ಚಲಿಸುವ ನೀರಿನಂತೆ ಮುಂದುವರಿಯಬೇಕು ಎಂದು ಹೇಳಿದರು.

ಸಾಹಿತ್ಯದಲ್ಲಿ ಸಾಧನೆಗೈದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭೋಗ್, ಕಲಾಕ್ಷೇತ್ರದ ಸಾಧಕಿ ವಾರಿಜ ಬಾಳಿಲ, ಯಕ್ಷಗಾನ ಕಲಾವಿದ ರಾಮಚಂದ್ರ ಅರ್ಬಿತ್ತಾಯ ಇವರುಗಳನ್ನು ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಜಾಕೆ ಮಾಧವ ಗೌಡ ಸನ್ಮಾನಿಸಿ ಗೌರವಿಸಿದರು.

ಸಭಾಧ್ಯಕ್ಷತೆ ವಹಿಸಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ|ಹರಿಪ್ರಸಾದ್ ತುದಿಯಡ್ಕ ಗಾಯಕ ಶಶಿಧರ್ ಕೋಟೆ ಹಾಗು ಜಾಕೆ ಮಾಧವ ಗೌಡ ಅವರನ್ನು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಗಿರಿಜಾ, ಕನ್ನಡ ಸಾಹಿತ್ಯ ಪರಿಷತ್ ಕೋಶಾಧಿಕಾರಿ ದಯಾನಂದ ಆಳ್ವ, ಕಾಲೇಜು ಪ್ರಾಂಶುಪಾಲೆ ಹಸೀನಾ ಬಾನು, ಹಿರಿಯ ಶಿಕ್ಷಕಿ ನಾಗರತ್ನ, ಪ್ರೌಢಶಾಲಾ ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ ಉಪಸ್ಥಿತರಿದ್ದರು. ಸುವಿಚಾರ ಸಾಹಿತ್ಯ ವೇದಿಕೆಯ ಅಧ್ಯಕ್ಷ ಚಂದ್ರಶೇಖರ ಪೇರಾಲು ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ತೇಜಸ್ವಿ ಕಡಪಾಳ ವಂದಿಸಿದರು. ಶಿಕ್ಷಕಿ ಮಮತಾ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 hour ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

5 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

9 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago