ಬೆಳ್ಳಾರೆ: ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆಯನ್ನು ಎಂದಿಗೂ ಮರೆಯಕೂಡದು. ಹಿರಿಯರ ಪರಂಪರೆಗೆ ವಿದ್ಯಾರ್ಥಿಗಳೇ ಉತ್ತರಾಧಿಕಾರಿಗಳಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿಯೂ ವಿದ್ಯಾರ್ಥಿಗಳದ್ದಾಗಿದೆ ಎಂದು ಖ್ಯಾತ ಗಾಯಕ ಶಶಿಧರ್ ಕೋಟೆ ಹೇಳಿದರು.
ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ನಡೆದ 5ನೇ ವರ್ಷದ ಕನ್ನಡ ರಾಜ್ಯೋತ್ಸವದ ಸಾಹಿತ್ಯ ಸಂಭ್ರಮ 2019 ಇದರ ಸಮಾರೋಪ ಹಾಗು ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಎಲ್ಲಾ ಭಾಷೆಗಳನ್ನು ಪ್ರೀತಿಸಿಕೊಂಡು ನಮ್ಮ ಸಂಸ್ಕೃತಿಯ ಪರಿಧಿಯಲ್ಲಿಯೇ ಒಳ್ಳೆಯದಕ್ಕೆ ಬದಲಾವಣೆಗಳನ್ನು ಮಾಡಿಕೊಂಡು ಚಲಿಸುವ ನೀರಿನಂತೆ ಮುಂದುವರಿಯಬೇಕು ಎಂದು ಹೇಳಿದರು.
ಸಾಹಿತ್ಯದಲ್ಲಿ ಸಾಧನೆಗೈದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭೋಗ್, ಕಲಾಕ್ಷೇತ್ರದ ಸಾಧಕಿ ವಾರಿಜ ಬಾಳಿಲ, ಯಕ್ಷಗಾನ ಕಲಾವಿದ ರಾಮಚಂದ್ರ ಅರ್ಬಿತ್ತಾಯ ಇವರುಗಳನ್ನು ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಜಾಕೆ ಮಾಧವ ಗೌಡ ಸನ್ಮಾನಿಸಿ ಗೌರವಿಸಿದರು.
ಸಭಾಧ್ಯಕ್ಷತೆ ವಹಿಸಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ|ಹರಿಪ್ರಸಾದ್ ತುದಿಯಡ್ಕ ಗಾಯಕ ಶಶಿಧರ್ ಕೋಟೆ ಹಾಗು ಜಾಕೆ ಮಾಧವ ಗೌಡ ಅವರನ್ನು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಗಿರಿಜಾ, ಕನ್ನಡ ಸಾಹಿತ್ಯ ಪರಿಷತ್ ಕೋಶಾಧಿಕಾರಿ ದಯಾನಂದ ಆಳ್ವ, ಕಾಲೇಜು ಪ್ರಾಂಶುಪಾಲೆ ಹಸೀನಾ ಬಾನು, ಹಿರಿಯ ಶಿಕ್ಷಕಿ ನಾಗರತ್ನ, ಪ್ರೌಢಶಾಲಾ ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ ಉಪಸ್ಥಿತರಿದ್ದರು. ಸುವಿಚಾರ ಸಾಹಿತ್ಯ ವೇದಿಕೆಯ ಅಧ್ಯಕ್ಷ ಚಂದ್ರಶೇಖರ ಪೇರಾಲು ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ತೇಜಸ್ವಿ ಕಡಪಾಳ ವಂದಿಸಿದರು. ಶಿಕ್ಷಕಿ ಮಮತಾ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…