ಸುಳ್ಯ: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸುಳ್ಯ ತಾಲೂಕು ಸಮ್ಮೇಳನ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಸಿಐಟಿಯು ತಾಲೂಕು ಅಧ್ಯಕ್ಷ ಬಿಜು ಅಗಸ್ಟಿಯನ್ ಅಧ್ಯಕ್ಷತೆ ವಹಿಸಿದ್ದರು. ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಸಮ್ಮೇಳನವನ್ನು ಉದ್ಘಾಟಿಸಿದರು. ದಕ ಜಿಲ್ಲಾ ಸಿಐಟಿಯು ಪ್ರದಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮುಖ್ಯ ಅತಿಥಿಯಾಗಿದ್ದರು.
ಕಾರ್ಮಿಕ ಸಂಘದ ಪ್ರತಿನಿಧಿಗಳು ಭಾಗವಹಿಸಿ ಪ್ರಸ್ತುತ ಕಾರ್ಮಿಕ ವರ್ಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸುಳ್ಯದಲ್ಲಿ ಅಧಾರ್ ತಿದ್ದುಪಡಿ ಮಾಡಲು ಸರಿಯಾದ ವ್ಯವಸ್ಥೆ ಇಲ್ಲದಿರುವುದು ಬಡ ಮತ್ತು ಕಾರ್ಮಿಕ ವರ್ಗಕ್ಕೆ ತೀವ್ರ ಸಮಸ್ಯೆ ಉಂಟು ಮಾಡುತಿದೆ. ನೋಟು ಅಮಾನ್ಯೀಕರಣ ಹಾಗೂ ಅಪಕ್ವವಾದ ಜಿಎಸ್ ಟಿ ಹೇರಿಕೆಯಿಂದ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ ಎಂದು ಸಮ್ಮೇಳನದಲ್ಲಿ ಮಾತನಾಡಿದ ಪ್ರಮುಖರು ಹೇಳಿದರು. ಕಾರ್ಮಿಕ ವರ್ಗವನ್ನು ಕೇವಲವಾಗಿ ಕಾಣುವ ಆಢಳಿತ ವರ್ಗದ ಧೋರಣೆಗಳ ವಿರುದ್ದ ಮುಂದೆ ಹೊರಾಟ ತೀವ್ರಗೊಳಿಸಲು ನಿರ್ಧರಿಸಿ ಕಾರ್ಮಿಕರು ದೊಡ್ಡ ಸಂಖ್ಯೆಯಲ್ಲಿ ಒಂದಾಗಬೇಕೆಂದು ಕರೆ ನೀಡಲಾಯಿತು. ನೂತನ ಸಾಲಿನ ಸಮಿತಿಯನ್ನು ರಚಿಸಲಾಯಿತು.
ಸಿಐಟಿಯು ನಾಯಕ ನಾಗರಾಜ್ ಕಲ್ಲುಮುಟ್ಲು ಸ್ವಾಗತಿಸಿದರು. ಸಿಐಟಿಯು ಜಿಲ್ಲಾ ಸಮಿತಿ ಸದಸ್ಯರಾದ ಕೆ.ಪಿ.ರಾಬರ್ಟ್ ಡಿಸೋಜ ವಂದಿಸಿದರು.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…