ಸಿರಿಬಾಗಿಲು : ರೈಲು ಹಳಿ ಮೇಲೆ ಮಣ್ಣು ಕುಸಿತ

July 8, 2019
9:58 PM

ಸುಬ್ರಹ್ಮಣ್ಯ: ಮಂಗಳೂರು ಬೆಂಗಳೂರು ರೈಲು ಮಾರ್ಗದಲ್ಲಿ  ಮತ್ತೆ ಹಳಿಯ ಮೇಲೆ ಮಣ್ಣು ಕುಸಿತಗೊಂಡು ಸೋಮವಾರ ಬೆಳಗ್ಗೆ ರೈಲು ಸಂಚಾರದಲ್ಲಿ  ಕೊಂಚ ವ್ಯತ್ಯಯವಾಗಿದ್ದು ಬಳಿಕ ಸಂಚಾರ ಸುಗಮಗೊಂಡಿದೆ. ಶಿರಾಡಿ ಘಾಟಿ ಪ್ರದೇಶದಲ್ಲಿ ಪ್ರತೀ ವರ್ಷವೂ ಮಣ್ಣು ಹಳಿಯ ಮೇಲೆ ಕುಸಿತವಾಗಿ ಸಂಚಾರ ಸ್ಥಗಿತಗೊಳ್ಳುತ್ತದೆ. ಈ ಬಾರಿಯೂ ಪುನರಾವರ್ತನೆಯಾಗಿದೆ.

ಸೋಮವಾರ ಬೆಳಗ್ಗೆ ರೈಲು ಹಳಿಯ ಮೇಲೆ ಮಣ್ಣು ಕುಸಿತವಾದ ಮಾಹಿತಿ ಲಭ್ಯವಾದ ತಕ್ಷಣವೇ ತೆರವು ಕಾರ್ಯಾಚರಣೆ ನಡೆದಿದೆ. ಹೀಗಾಗಿ ಯಾವುದೇ ಸಮಸ್ಯೆಯಾಗಲಿಲ್ಲ. ಗೂಡ್ಸ್ ರೈಲು ಸಂಚಾರದಲ್ಲಿ  ಕೊಂಚ ವ್ಯತ್ಯಯ ಉಂಟಾಯಿತು.

ಕಳೆದ ವಾರ ಶಿರಾಡಿ ಘಾಟ್ ಮೂಲಕ ರೈಲು ಓಡಾಟಕ್ಕೆ ಮಳೆಗಾಲ ಸುರಕ್ಷಿತವೇ ಎಂದು ರೈಲ್ವೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಇದೀಗ ಕಳೆದ ಎರಡು ವರ್ಷಗಳಿಂದ ಶಿರಾಡಿ ಘಾಟ್ ರೈಲು ಹಳಿಯ ಕಡೆಗೆ ವಿಶೇಷ ಗಮನ ನೀಡಲಾಗುತ್ತಿದ್ದು ಮಳೆಗಾಲ ಹೆಚ್ಚುವರಿಯಾಗಿ ಸುರಕ್ಷತೆಯ ಕಡೆಗೆ ಗಮನನೀಡಲಾಗುತ್ತಿದೆ. ಮಣ್ಣು ಕುಸಿತದ ಸಂದರ್ಭ ತಕ್ಷಣವೇ ಕಾರ್ಯಾಚರಣೆ ಮಾಡಲು ವಿಶೇಷ ತಂಡ ರಚನೆಯಾಗಿದೆ.

ಇದೀಗ ಶಿರಾಡಿ ಘಾಟ್ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು ಮತ್ತೆ ಕುಸಿತದ ಭೀತಿ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ
ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್

You cannot copy content of this page - Copyright -The Rural Mirror