ಉಜಿರೆ: ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದಾಗ ಸ್ವಚ್ಛ ಪರಿಸರ ನಿರ್ಮಾಣವಾಗುತ್ತದೆ. ಕಸ ಸೃಷ್ಟಿ ಮಾಡುವುದು ಮತ್ತು ಬಿಸಾಡುವುದು ನಮ್ಮ ಸಂಸ್ಕೃತಿ ಅಲ್ಲ. ಸುಂದರ ಪರಿಸರದೊಂದಿಗೆ ಸುಂದರ ಹಾಗೂ ನೆಮ್ಮದಿಯ ಬದುಕು ಸಾಧ್ಯ ಎಂದು ಧರ್ಮಸ್ಥಳದ ಶ್ರದ್ಧಾ ಅಮಿತ್ ಹೇಳಿದರು.
ಉಜಿರೆಯಲ್ಲಿ ಎಸ್.ಡಿ.ಎಂ.ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬುಧವಾರ ಅವರು, ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಉಳಿಸಿ ಸ್ವಚ್ಛತಾ ಅಭಿಯಾನದಲ್ಲಿ ಹಳೆ ಬಟ್ಟೆಗಳಿಂದ ತಯಾರಿಸಿದ ಚೀಲಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನದಿ ನೀರನ್ನು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಕಲುಷಿತಗೊಳಿಸದಂತೆ ಹಿರಿಯರು ಮಕ್ಕಳಲ್ಲಿ ಅರಿವು, ಜಾಗೃತಿ ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.
ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಮಾತನಾಡಿ, ಭವಿಷ್ಯದಲ್ಲಿ ನಾವು ತಾಂತ್ರಿಕ ಬೆಳವಣಿಗೆ, ಜಾಗತೀಕರಣ ಮತ್ತು ಪರಿಸರ ಮಾಲಿನ್ಯ ಎಂಬ ದೊಡ್ಡ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಸ್ವಚ್ಛ ಪರಿಸರದೊಂದಿಗೆ ಪ್ಲಾಸ್ಟಿಕ್ ಬಳಕೆ ರಹಿತ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳನ್ನು ರೂಪಿಸಲಾಗುವುದು. ಈಗಾಗಲೆ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಯಶಸ್ವಿ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಅವರು ಹೇಳಿದರು.
ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್ ಮಾತನಾಡಿ, ಪರಿಸರವನ್ನು ಪ್ರೀತಿಸಿ, ಉತ್ತಮ ವಾತಾವರಣ ರೂಪಿಸಲು ಎಲ್ಲರೂ ಪಣತೊಡಬೇಕು ಎಂದು ಸಲಹೆ ನೀಡಿದರು. ಧರ್ಮಸ್ಥಳದ ಮಾನ್ಯ, ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್. ದಿನೇಶ್ ಚೌಟ ಉಪಸ್ಥಿತರಿದ್ದರು.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490