Advertisement
ಕಾರ್ಯಕ್ರಮಗಳು

ಸುಂದರ ಪರಿಸರದೊಂದಿಗೆ ಸುಂದರ ಬದುಕು ಸಾಧ್ಯ- ಧರ್ಮಸ್ಥಳದಲ್ಲಿ ಶ್ರದ್ಧಾ ಅಮಿತ್

Share

ಉಜಿರೆ: ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದಾಗ ಸ್ವಚ್ಛ ಪರಿಸರ ನಿರ್ಮಾಣವಾಗುತ್ತದೆ. ಕಸ ಸೃಷ್ಟಿ ಮಾಡುವುದು ಮತ್ತು ಬಿಸಾಡುವುದು ನಮ್ಮ ಸಂಸ್ಕೃತಿ ಅಲ್ಲ. ಸುಂದರ ಪರಿಸರದೊಂದಿಗೆ ಸುಂದರ ಹಾಗೂ ನೆಮ್ಮದಿಯ ಬದುಕು ಸಾಧ್ಯ ಎಂದು ಧರ್ಮಸ್ಥಳದ ಶ್ರದ್ಧಾ ಅಮಿತ್ ಹೇಳಿದರು.

ಉಜಿರೆಯಲ್ಲಿ ಎಸ್.ಡಿ.ಎಂ.ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬುಧವಾರ ಅವರು, ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಉಳಿಸಿ ಸ್ವಚ್ಛತಾ ಅಭಿಯಾನದಲ್ಲಿ ಹಳೆ ಬಟ್ಟೆಗಳಿಂದ ತಯಾರಿಸಿದ ಚೀಲಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನದಿ ನೀರನ್ನು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಕಲುಷಿತಗೊಳಿಸದಂತೆ ಹಿರಿಯರು ಮಕ್ಕಳಲ್ಲಿ ಅರಿವು, ಜಾಗೃತಿ ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.

ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಮಾತನಾಡಿ, ಭವಿಷ್ಯದಲ್ಲಿ ನಾವು ತಾಂತ್ರಿಕ ಬೆಳವಣಿಗೆ, ಜಾಗತೀಕರಣ ಮತ್ತು ಪರಿಸರ ಮಾಲಿನ್ಯ ಎಂಬ ದೊಡ್ಡ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಸ್ವಚ್ಛ ಪರಿಸರದೊಂದಿಗೆ ಪ್ಲಾಸ್ಟಿಕ್ ಬಳಕೆ ರಹಿತ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳನ್ನು ರೂಪಿಸಲಾಗುವುದು. ಈಗಾಗಲೆ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಯಶಸ್ವಿ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಅವರು ಹೇಳಿದರು.

ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್ ಮಾತನಾಡಿ, ಪರಿಸರವನ್ನು ಪ್ರೀತಿಸಿ, ಉತ್ತಮ ವಾತಾವರಣ ರೂಪಿಸಲು ಎಲ್ಲರೂ ಪಣತೊಡಬೇಕು ಎಂದು ಸಲಹೆ ನೀಡಿದರು. ಧರ್ಮಸ್ಥಳದ  ಮಾನ್ಯ, ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್. ದಿನೇಶ್‍ ಚೌಟ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

9 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

10 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

11 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

11 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

2 days ago