ಸುಬ್ರಹ್ಮಣ್ಯ: ಸಕಲ ಜೀವರಾಶಿಗಳಿಗೂ ಗಾಳಿ, ನೀರು, ಆಹಾರ ಮುಖ್ಯ. ಹೀಗಾಗಿ ಪರಿಸರ ಸಂರಕ್ಷಣೆ ಅವಶ್ಯಕ. ಉಸಿರು ನೀಡುವ ಮರಗಳನ್ನು ರಕ್ಷಿಸುವುದು ನಮ್ಮ ಹೊಣೆ ಎಂದು ವನ್ಯಜೀವಿ ತಜ್ಞ ಭುವನೇಶ್ ಕೈಕಂಬ ಹೇಳಿದರು.
ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಹಾಗೂ ಯೂತ್ ರೆಡ್‍ಕ್ರಾಸ್ ಘಟಕಗಳು ಜೊತೆಗೂಡಿ ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಿದ ವನಮಹೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಗಳಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಹಾವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನ್ ದಾಸ್ ರೈ ಅವರು ತ್ಯಾಜ್ಯ ಸಂಸ್ಕರಿಸುವ ಕೊಳವೆಯ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿ ಕರಣೀಮಠ್ ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿದ್ದ್ರರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು.
ವೇದಿಕೆಯಲ್ಲಿ ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ರಮಾನಾಥ್, ಶಿವಪ್ರಸಾದ್ ಹಾಗೂ ಯೂತ್ ರೆಸ್‍ಕ್ರಾಸ್ ಅಧಿಕಾರಿಗಳಾದ ಮಧುರಾ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಪ್ರೋ. ಉದಯಕುಮಾರ್ ಕೆ ಸ್ವಾಗತಿಸಿ, ಎನ್.ಎಸ್.ಎಸ್ ಯೋಜನಾಧಿಕಾರಿ ಶಿವಪ್ರಸಾದ್ ವಂದಿಸಿದರು. ಲೋಹಿತ್ ಎಂ ಕಾರ್ಯಕ್ರಮ ನಿರೂಪಿಸಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?