ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟುವಿಗೆ ಅಭಿನಂದನೆ

January 31, 2020
6:45 AM

ಸುಬ್ರಹ್ಮಣ್ಯ: ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ  ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ 8ನೇ ತರಗತಿ ವಿದ್ಯಾರ್ಥಿ ಅಭಿಜಿತ್ ಎಸ್.ಕೆ ಕಲ್ಲಪಣೆ ಇವರಿಗೆ ವಿದ್ಯಾಸಂಸ್ಥೆಯಿಂದ ಅಭಿನಂದನಾ ಸಮಾರಂಭ ಶನಿವಾರ) ನಡೆಯಲಿದೆ.

Advertisement
Advertisement
Advertisement

ರಾಷ್ಟ್ರೀಯ ಕ್ರೀಡಾಪಟುವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ತೆರೆದ ವಾಹನದಲ್ಲಿ  ಮೆರವಣಿಗೆಯ ಮೂಲಕ ಸಮಾರಂಭಕ್ಕೆ ಕರೆತರಲಾಗುವುದು. ಮೆರವಣಿಗೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್ ಉದ್ಘಾಟಿಸಲಿದ್ದಾರೆ.
ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯುವ ಅಭಿನಂದನಾ ಸಮಾರಂಭದಲ್ಲಿ ಅಭಿಜಿತ್ ಎಸ್.ಕೆ ಜೊತೆಗೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ಯಲ್ಲಿ ದ್ವಿತೀಯ ಸ್ಥಾನ ಪಡೆದ ಪ್ರಥಮ ಗಣಕ ವಿಜ್ಞಾನ ವಿಭಾಗದ ಅನಂತ ಎಂ ಅವರನ್ನು ಗೌರವಿಸಲಾಗುವುದು.

Advertisement

ಸಮಾರಂಭದಲ್ಲಿ ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲ್, ದೈಹಿಕ ಶಿಕ್ಷಣ ಪರಿವೀಕ್ಷಕ ಲಕ್ಷ್ಮೀಶ ರೈ, ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ.ಕೆ, ಪ್ರೌಢಶಾಲಾ ಮುಖ್ಯಗುರು ಕೆ.ಯಶವಂತ ರೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಲೋಕೇಶ್ವರ ಡಿ.ಆರ್ ಮತ್ತು ನೀಲಪ್ಪ ಗೌಡ ಮುಖ್ಯಅತಿಥಿಗಳಾಗಿದ್ದಾರೆ.

Advertisement

ಗ್ರಾಮೀಣ ಪ್ರದೇಶ ಕುಕ್ಕೆ ಸುಬ್ರಹ್ಮಣ್ಯದ ನಿವಾಸಿಯಾದ ಇವರು ಬಡತನದ ನಡುವೆ ಪರಿಶ್ರಮದಿಂದ ರಾಷ್ಟ್ರೀಯ ಕ್ರೀಡಾಪಟುವಾಗಿ ಹೊರಹೊಮ್ಮಿದ್ದಾರೆ. ಶಿಕ್ಷಣ ಇಲಾಖೆಯಿಂದ ಛತ್ತೀಸ್‍ಗಡದಲ್ಲಿ ನಡೆದ 65ನೇ ರಾಷ್ಟ್ರೀಯ ಕ್ರೀಡಾಕೂಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಶ್ರೇಷ್ಠತಮ ಆಟ ಪ್ರದರ್ಶನದ ಮೂಲಕ ರಾಜ್ಯ ತಂಡವು ತೃತೀಯ ಪಡೆಯುವಂತೆ ಮಾಡಿದ್ದಾರೆ. ಶ್ರಮ ಮತ್ತು ಸ್ವ-ಪರಿಶ್ರಮದಿಂದ ಶ್ರೇಷ್ಠವಾದ ಮೆಟ್ಟಿಲನ್ನು ಎಳವೆಯಲ್ಲಿಯೇ ಏರುವ ಮೂಲಕ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಈ ಮೊದಲು ಮಂಡ್ಯದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಇವರು ಪ್ರತಿನಿಧಿಸಿದ ದ.ಕ ಜಿಲ್ಲಾ ತಂಡ ದ್ವಿತೀಯ ಸ್ಥಾನ ಪಡೆದಿತ್ತು.ಇವರು ಕುಕ್ಕೆ ಸುಬ್ರಹ್ಮಣ್ಯದ ಕಲ್ಲಪಣೆಯ ಶೇಷಪ್ಪ ಮತ್ತು ಲಕ್ಷ್ಮೀ ದಂಪತಿಗಳ ಪುತ್ರ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ
ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ
ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ
November 23, 2024
6:12 AM
by: The Rural Mirror ಸುದ್ದಿಜಾಲ
ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ
November 23, 2024
6:06 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror