ಸುಬ್ರಹ್ಮಣ್ಯ: ಕೇವಲ ವಿದ್ಯಾಲಯಕ್ಕೆ ಕಳುಹಿಸಿದರೆ ಪೋಷಕರ ಕರ್ತವ್ಯ ಮುಗಿಯುವುದಿಲ್ಲ ಬದಲಾಗಿ ಮಕ್ಕಳ ಬಗ್ಗೆ ನಿರಂತರ ಆಸ್ಥೆ ವಹಿಸಬೇಕು.ಅಲ್ಲದೆ ಮಕ್ಕಳಿಗೆ ಶಿಸ್ತಿನ ಅರಿವು ಸದಾ ಅನುರಣಿತವಾಗುವಂತೆ ಮಾಡಬೇಕು ಹಾಗಾದಾಗ ಮಕ್ಕಳ ಭವಿಷ್ಯ ಉಜ್ವಲವಾಗುವುದರಲ್ಲಿ ಸಂದೇಹವಿಲ್ಲ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.
ಅವರು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮತ್ತು ಪೋಷಕರ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕುಕ್ಕೆ ದೇವಳದ ವತಿಯಿಂದ ಕಾಲೇಜಿಗೆ ಅಗತ್ಯವಾದ ಎಲ್ಲಾ ಸವಲತ್ತುಗಳನ್ನು ನೀಡಲಾಗಿದೆ.ಅಲ್ಲದೆ ಶ್ರೀ ದೇವರ ವರಪ್ರಸಾದದಿಂದ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಕಾಲೇಜಿನಲ್ಲಿ ನೆರವೇರಲಿದೆ.ಅಲ್ಲದೆ ವಿದ್ಯಾರ್ಥಿಗಳ ವಿದ್ಯಾರ್ಜನೆ ಇನ್ನಷ್ಟು ಆವಶ್ಯಕತೆಗಳನ್ನು ಆಡಳಿತ ಮಂಡಳಿ ಒದಗಿಸಲಿದೆ ಎಂದರು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೋಕೇಶ್ವರ ಡಿ.ಆರ್ ಮುಖ್ಯಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ.ಕೆ, ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್,ಹಿರಿಯ ಉಪನ್ಯಾಸಕರಾದ ಎ.ಆರ್.ಮುಲ್ಲಾ, ಸೋಮಶೇಖರ ನಾಯಕ್, ಜಯಶ್ರೀ.ವಿ.ದಂಬೆಕೋಡಿ, ಮೋಹನ್ ಗೌಡ ಸೇರಿದಂತೆ ಉಪನ್ಯಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ನುಡಿ ಹರೆಯವನ್ನು ಬಿಡುಗಡೆಗೊಳಿಸಲಾಯಿತು. ಸಮಾರಂಭದಲ್ಲಿ ಪೋಷಕರು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಸಮಾಗಮ ನೆರವೇರಿತು.ನೂತನವಾಗಿ ಪ್ರಥಮ ಪಿಯುಸಿಗೆ ಆಗಮಿಸಿದ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಕಾಲೇಜಿನ ಬಗ್ಗೆ, ಇಲ್ಲಿನ ಸವಲತ್ತುಗಳ ಬಗ್ಗೆ, ಅಳವಡಿಸಿಕೊಳ್ಳಬೇಕಾದ ಶಿಸ್ತಿನ ಬಗ್ಗೆ ಮಾಹಿತಿ ನೀಡಲಾಯಿತು.
ಉಪನ್ಯಾಸಕ ಮೋಹನ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್ ಪ್ರಸ್ತಾಪಿಸಿದರು.ಉಪನ್ಯಾಸಕಿ ಜ್ಯೋತಿ.ಪಿ.ರೈ ವಂದಿಸಿದರು. ಉಪನ್ಯಾಸಕಿ ಸುಧಾ ಕಾರ್ಯಕ್ರಮ ನಿರೂಪಿಸಿದರು.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…